Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Team Udayavani, Jul 4, 2024, 12:18 PM IST

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

ಬೆಂಗಳೂರು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರೇಮಿಗಳಿಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ.

ಕೋಣನಕುಂಟೆ ನಿವಾಸಿ ಶ್ರೀಕಾಂತ್‌(24) ಮತ್ತು ತಲಘಟ್ಟಪುರ ಸಮೀಪದ ಅಂಜನಾಪುರದ ನಿವಾಸಿ ಅಂಜನಾ(20) ಆತ್ಮಹತ್ಯೆಗೆ ಶರಣಾದವರು.

ಜುಲೈ 1ರಂದು ಇಬ್ಬರು ನಾಪತ್ತೆಯಾಗಿದ್ದರು. ಮಂಗಳವಾರ ಸಂಜೆ ಇಬ್ಬರ ಮೃತದೇಹ ನೈಸ್‌ ರಸ್ತೆಯ ತುಳಸಿಪುರ ಕೆರೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.

ಈಗಾಗಲೇ ಮದುವೆಯಾಗಿದ್ದ ಶ್ರೀಕಾಂತ್‌, ಖಾಸಗಿ ಕಾಲೇಜಿನಲ್ಲಿ ಬಿ.ಕಾಂ ಅಂತಿಮ ವರ್ಷದಲ್ಲಿ ಓದುತ್ತಿದ್ದ. ಸಂಜೆ ಹೊತ್ತು ಆಟೋ ಕೂಡ ಓಡಿಸುತ್ತಿದ್ದ. 1 ವರ್ಷದ ಹಿಂದೆ ಸಹನಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಆ ನಂತರವೂ ಕಾಲೇಜಿಗೆ ಹೋಗುತ್ತಿದ್ದ. ಇದೇ ಕಾಲೇಜಿನಲ್ಲಿ ಓದುತ್ತಿದ್ದ ಅಂಜನಾಳ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಈ ವಿಚಾರಕ್ಕೆ ಶ್ರೀಕಾಂತ್‌ ಮತ್ತು ಆತನ ಪತ್ನಿಯ ನಡುವೆ ಜಗಳ ನಡೆದಿತ್ತು. ಅಲ್ಲದೇ ಅಂಜನಾ ಪೋಷಕರು ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ಅದರಿಂದ ಬೇಸರಗೊಂಡಿದ್ದ ಶ್ರೀಕಾಂತ್‌ ಪ್ರೇಯಸಿ ಅಂಜನಾ ಜತೆ ಮನೆ ಬಿಟ್ಟು ಹೋಗಿದ್ದ. ಈ ಸಂಬಂಧ ಕೋಣನಕುಂಟೆ ಮತ್ತು ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳ ತನಿಖೆ ಬೆನ್ನತ್ತಿದ್ದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.

ಅಣ್ಣನ ಆಟೋದಲ್ಲಿ ಪ್ರೇಯಸಿ ಕರೆದೊಯ್ದ!: ಇತ್ತ ಶ್ರೀಕಾಂತ್‌ ಮನೆ ಬಿಟ್ಟು ಬರುವಾಗ ತನ್ನ ಅಣ್ಣನ ಆಟೋ ತೆಗೆದುಕೊಂಡು ಬಂದಿದ್ದು, ಈ ಆಟೋದಲ್ಲೇ ಪ್ರೇಯಸಿ ಅಂಜನಾಳನ್ನು ಕರೆದೊಯ್ದಿದ್ದಾನೆ. ಬಳಿಕ ಇಬ್ಬರು ತುಳಸೀಪುರ ಕೆರೆ ಬಳಿ ಹೋಗಿದ್ದಾನೆ. ನಂತರ ಕೆರೆ ದಡದಲ್ಲಿ ಚಪ್ಪಲಿ ಬಿಟ್ಟು, ನಮ್ಮ ಸಾವಿಗೆ ಯಾರು ಕಾರಣರಲ್ಲ ಎಂದು ಡೆತ್‌ನೋಟ್‌ ಬರೆದಿಟ್ಟು, ಬಳಿಕ ಕೈಗಳಿಗೆ ಪರಸ್ಪರ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮತ್ತೂಂದೆಡೆ ನಾಪತ್ತೆ ಪ್ರಕರಣಗಳಲ್ಲಿ ಶೋಧ ಕಾರ್ಯ ಆರಂಭಿಸಿದ ಪೊಲೀಸರಿಗೆ, ಸ್ಥಳೀಯರು ಆಟೋ ಬಗ್ಗೆ ಮಾಹಿತಿ ನೀಡಿದ್ದರು. ಆಟೋ ಜಾಡು ಬೆನ್ನತ್ತಿದಾಗ ಮಂಗಳವಾರ ಸಂಜೆ ನೈಸ್‌ ರಸ್ತೆಯ ತುಳಸಿಕೆರೆ ಸಮೀಪ ಆಟೋ ನಿಂತಿರುವುದು ಪತ್ತೆಯಾಗಿತ್ತು. ಹೀಗಾಗಿ, ಪೊಲೀಸರ ಸಮ್ಮುಖದಲ್ಲಿ ಕೆರೆಯಲ್ಲಿ ಹುಡುಕಾಡಿದಾಗ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ವಿಚ್ಛೇದನಕ್ಕೆ ಒಪ್ಪಿದ್ದ ಪತ್ನಿ! : ಅಚ್ಚರಿಯ ಸಂಗತಿ ಎಂದರೆ, ಶ್ರೀಕಾಂತ್‌ನ ಪತ್ನಿ ಸಹನಾ, ಪತಿಯ ಪ್ರೇಮದ ವಿಚಾರ ತಿಳಿದು ಆತನೊಂದಿಗೆ ಜಗಳ ಮಾಡಿದ್ದಳು. ಆದರೆ, ಕೆಲ ದಿನಗಳ ಹಿಂದೆ ಆತನ ಹುಚ್ಚು ಪ್ರೇಮ ಕಂಡು, ನಾನೇ ಸ್ವ ಇಚ್ಛೆಯಿಂದ ವಿಚ್ಛೇದನ ನೀಡುತ್ತೇನೆ. ನೆಮ್ಮದಿಯಿಂದ ಆಕೆ ಜತೆ ಜೀವನ ನಡೆಸಿ ಎಂದು ಪತಿ ಶ್ರೀಕಾಂತ್‌ಗೆ ಹೇಳಿದ್ದರು ಎಂದು ಹೇಳಲಾ ಗಿದೆ. ಆದರೂ ಶ್ರೀಕಾಂತ್‌, ಪ್ರೇಯಸಿ ಅಂಜನಾ ಳನ್ನು ಕರೆದೊಯ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಡೆತ್‌ನೋಟ್‌ ಪತ್ತೆ: ಇನ್ನು ಸಾವಿಗೂ ಮುನ್ನ ಪ್ರೇಮಿಗಳಿಬ್ಬರು ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹೀಗಾಗಿ ಸಾಯುತ್ತಿದ್ದೇವೆ ಎಂದು ಮೊಬೈಲ್‌ ನಲ್ಲಿ ಸೆಲ್ಫಿà ವಿಡಿಯೋ ಮಾಡಿ, ಸಂಬಂಧಿಕರಿಗೆ ಕಳುಹಿಸಿದ್ದಾರೆ. ಅಲ್ಲದೆ, 2 ಮೊಬೈಲ್‌ಗ‌ಳನ್ನು ಆಟೋದಲ್ಲಿಟ್ಟು ಕೆರೆಗೆ ಹಾರಿದ್ದಾರೆ. ಮೊಬೈಲ್‌ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇಬ್ಬರು ಪ್ರೇಮಿಗಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಪೋಷಕರು ನೀಡಿದ ದೂರಿನ ಮೇರೆಗೆ ಎರಡು ಪ್ರತ್ಯೇಕ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ತನಿಖೆ ನಡೆಯುತ್ತಿದೆ. -ಲೋಕೆಶ್‌ ಜಗಲಾಸರ್‌, ದಕ್ಷಿಣ ವಿಭಾಗ ಡಿಸಿಪಿ.

ಟಾಪ್ ನ್ಯೂಸ್

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.