ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
Team Udayavani, Jul 4, 2024, 12:39 PM IST
ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು.. ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
ಬೆಂಗಳೂರು: ನಟ ಯುವರಾಜ್ ಕುಮಾರ್ (Yuvaraj Kumar) ಹಾಗೂ ಶ್ರೀದೇವಿ ಭೈರಪ್ಪ(Sridevi byrappa) ಅವರ ವಿಚ್ಚೇದನದ ಪ್ರಕರಣದ (Divorce case) ವಿಚಾರಣೆ ಗುರುವಾರ(ಜು.4 ರಂದು) ನಡೆಯಲಿದೆ. ಈ ಕಾರಣಕ್ಕಾಗಿ ಕೆಲ ದಿನಗಳ ಹಿಂದೆಯೇ ಶ್ರಿದೇವಿ ಅವರು ಭಾರತಕ್ಕೆ ಬಂದಿದ್ದಾರೆ.
ಕಳೆದ ಕೆಲ ಸಮಯದಿಂದ ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ಭೈರಪ್ಪ ದಾಂಪತ್ಯ ಜೀವನದ ವಿಚಾರ ಸುದ್ದಿಯಲ್ಲಿದೆ. ಯುವ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಇಬ್ಬರ ನಡುವೆ ಆರೋಪ – ಪ್ರತ್ಯಾರೋಪ ಕೇಳಿ ಬಂದಿದೆ.
ಒಂದು ಕಡೆ ಶ್ರೀದೇವಿ ಭೈರಪ್ಪ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಇನ್ನೊಂದೆಡೆ ಯುವರಾಜ್ ಕುಮಾರ್(ಗುರುರಾಜ್ ಕುಮಾರ್) ಸಹನಟಿ ಜೊತೆ ಸಂಬಂಧವನ್ನು ಇಟ್ಟುಕೊಂಡಿದ್ದಾರೆ ಎಂದು ಆರೋಪವನ್ನು ಮಾಡಲಾಗಿದೆ. ವಿಚ್ಚೇದನ ಪ್ರಕರಣದ ವಿಚಾರಣೆ ನಡೆಯಲಿರುವ ಬೆನ್ನಲ್ಲೇ ಶ್ರೀದೇವಿ ಭೈರಪ್ಪ ಅವರು ಪೋಸ್ಟ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಪೋಸ್ಟ್ ನಲ್ಲಿ ಏನಿದೆ?:
“ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಾಮಾಣಿಕವಾಗಿ ನನ್ನ ಹೃದಯಾಂತರಳಾದಿಂದ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ.
ಕಳೆದ ದಶಕಗಳಿಂದ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ, ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರಾ ದುರಾದೃಷ್ಟಕರ. ಆದರೂ ಸಹ, ನಿಮ್ಮ ತಾಳ್ಮೆಗೆ, ಸತ್ಯದ ಪರ ಧೃತಿಗೆಡದೆ ನಿಲ್ಲುವ ನಿಮ್ಮ ಹಾಗೂ ನಿಮ್ಮ ಕುಟುಂಬದ ಸ್ಥೈರ್ಯಕ್ಕೆ ಸಹಕಾರಕ್ಕೆ ನಾನು ಅಭಾರಿಯಾಗಿದ್ದೇನೆ.
ಈ ವಿಚಾರದಲ್ಲಿ ನಿಮಗಾದ ನೋವಿಗೆ ನಾನು ವಿನಮ್ರತೆಯಿಂದ ಕ್ಷಮೆಯಾಚಿಸುತ್ತೇನೆ. ಎಲ್ಲರಿಗೂ ನಿಮ್ಮಂಥ ಸ್ನೇಹ ಬಳಗ ಸಿಗುವ ಅದೃಷ್ಟ ಸಿಗಲಿ ಎಂದು ಹಾರೈಸುತ್ತೇನೆ.
ಕಳೆದ ಏಳು ತಿಂಗಳು ತೀವ್ರ ಒತ್ತಡ ಹಾಗೂ ಆಘಾತದಿಂದ ಕೂಡಿದ್ದವು. ನನ್ನೊಂದಿಗೆ ಶಕ್ತಿಯಾಗಿ ನಿಂತ ನನ್ನ ಕುಟುಂಬ, ಸ್ನೇಹಿತರು, ಚಲನಚಿತ್ರರಂಗದ ಬಂಧುಗಳು, ಅನ್ಯಾಯದ ವಿರುದ್ಧ ಧ್ವನಿಯೆತ್ತಿ ನನ್ನ ಪರ ನಿಂತ ಪ್ರತಿಯೊಬ್ಬರಿಗೂ, ವಿಶೇಷವಾಗಿ ನನ್ನೊಂದಿಗೆ ದು:ಖಿಸಿ ಸಾಂತ್ವಾನ ಹೇಳಿದ ನನ್ನ ವಿದ್ಯಾರ್ಥಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನನ್ನ ಶಕ್ತಿಯನ್ನು ಮರಳಿ ಪಡೆಯಲು ಮತ್ತು ನ್ಯಾಯದ ಪರ ಹೋರಾಡಲು ನೀವೆಲ್ಲರೂ ನನಗೆ ಸಹಾಯ ಮಾಡಿದ್ದೀರಿ. ನಿಮ್ಮ ಪ್ರೀತಿ, ದಯೆಯ ಋಣ ತೀರಿಸುವ ಅವಕಾಶ ನನಗೆ ಸಿಗಲಿ ಎಂದು ನಾನು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ. ಹಾಗೂ ಅದಕ್ಕಾಗಿ ನಾನು ಹೋರಾಡುತ್ತೇನೆ ಎಂದು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ.
ಹಾರ್ವರ್ಡ್‌ನಲ್ಲಿ ನಾನು ಒಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರೆಸಲು ನಾನು ಅಮೆರಿಕಗೆ ಹಿಂತಿರುಗುತ್ತಿದ್ದೇನೆ. ಈ ಸಮಯವು ನನಗೆ ಇನ್ನಷ್ಟು ಕಲಿಯಲು, ಬೆಳೆಯಲು ಮತ್ತು ಎಲ್ಲಾ ಆಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂತಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರೆಸುತ್ತೇನೆ. ದೇವರ ಆಶೀರ್ವಾದ ಸದಾ ಎಲ್ಲರ ಮೇಲೆ ಇರಲಿ” ಎಂದು ಪೋಸ್ಟ್ ನಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್ ಫಿಕ್ಸ್
Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.