Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು
Team Udayavani, Jul 4, 2024, 11:20 PM IST
ಮಂಗಳೂರು: ವ್ಯಕ್ತಿಯೋರ್ವರು ಅನಾರೋಗ್ಯ ದಿಂದ ಆಸ್ಪತ್ರೆಯಲ್ಲಿದ್ದಾಗ ಆತನ ಸ್ನೇಹಿತನಾದ ವಕೀಲ ಇತರರೊಂದಿಗೆ ಸೇರಿಕೊಂಡು ಜಾಗ ಮಾರಾಟ ಮಾಡಿ 88.35 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಕೀಲ ಗಂಗಾಧರ ಎಚ್., ಕುಸುಮ ಕೆ. ಸುವರ್ಣ, ನೀರಜಾಕ್ಷಿ ಅಗರ್‌ವಾಲ್ ಮತ್ತು ಇತರ 11 ಮಂದಿ ಈ ಪ್ರಕರಣದ ಆರೋಪಿಗಳಾಗಿದ್ದಾರೆ. ಸುರತ್ಕಲ್ ಮುಂಚೂರಿನ ಕೆ.ರುಕ್ಕಯ್ಯ ಶೆಟ್ಟಿ ದೂರು ನೀಡಿದವರು.
ಪ್ರಕರಣದ ವಿವರ
ಕೆ.ರುಕ್ಕಯ್ಯ ಶೆಟ್ಟಿ ಕಟ್ಟಡ ನಿರ್ಮಾಣ ಮತ್ತು ಜಾಗದ ವ್ಯವಹಾರಗಳನ್ನು ನಡೆಸಿಕೊಂಡು ಬರುತ್ತಿದ್ದರು. ಈ ಜಾಗದ ವ್ಯವಹಾರವನ್ನು ಆಪ್ತಸ್ನೇಹಿತನಾದ ಗಂಗಾಧರ ಎಚ್. ಮೂಲಕ ಮಾಡಿಸುತ್ತಿದ್ದರು. ರುಕ್ಕಯ್ಯ ಶೆಟ್ಟಿ ಅವರು 2018ರಲ್ಲಿ ಕುಸುಮ ಕೆ.ಸುವರ್ಣ, ವಾರಿಜಾ ವಿ.ಬಂಗೇರ (ಈಗ ಮೃತರು) ಮತ್ತು ಆಕೆಯ ಪುತ್ರಿ ನೀರಜಾಕ್ಷಿ ಅಗರ್‌ವಾಲ್ ಅವರಿಂದ ಹೊಸಬೆಟ್ಟು ಗ್ರಾಮದಲ್ಲಿ 60.45 ಲಕ್ಷ ರೂ.ಗಳಿಗೆ ಜಾಗ ಖರೀದಿಸುವ ಬಗ್ಗೆ ಒಪ್ಪಂದ ಮಾಡಿಕೊಂಡು 20 ಲಕ್ಷ ರೂ ಮುಂಗಡ ಹಣ ಪಾವತಿಸಿದ್ದರು. ಆ ಜಾಗದಲ್ಲಿ ಕೆಲವು ಸೆಂಟ್ಸ್‌ಗಳನ್ನು ನವೀನ್ ಸಾಲ್ಯಾನ್ ಮತ್ತು ಕೇತನ್ ಕುಮಾರ್ ಅವರಿಗೆ ಮಾರಾಟ ಮಾಡುವ ಬಗ್ಗೆಯೂ ಒಪ್ಪಂದ ಮಾಡಿಕೊಂಡು ಅವರಿಂದ ಮುಂಗಡ ಹಣವನ್ನು ಕೂಡ ಪಡೆದಿದ್ದರು.
ರುಕ್ಕಯ್ಯ ಶೆಟ್ಟಿ ಖರೀದಿಸಲು ಒಪ್ಪಂದ ಮಾಡಿಕೊಂಡಿದ್ದ ಜಾಗದ ಅಭಿವೃದ್ಧಿ, ದಾಖಲೆಪತ್ರಗಳನ್ನು ಕ್ರಮಬದ್ಧಗೊಳಿಸುವ ಕೆಲಸ ಮಾಡುತ್ತಿದ್ದರು. 2020ರಲ್ಲಿ ರುಕ್ಕಯ್ಯ ಶೆಟ್ಟಿ ಅವರು ನರಸಂಬಂಧಿ ರೋಗಕ್ಕೆ ಒಳಗಾಗಿ ಸ್ಮರಣಶಕ್ತಿ ಕಳೆದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕುಟುಂಬವು ಈ ಜಾಗದ ವ್ಯವಹಾರಕ್ಕೆ ಗಂಗಾಧರ್ ಎಚ್. ಅವರನ್ನೇ ಅವಲಂಬಿಸಿತ್ತು. ಆದರೆ ರುಕ್ಕಯ್ಯ ಶೆಟ್ಟಿ ಅವರು ಚೇತರಿಸಿಕೊಂಡ ಅನಂತರ ಅವರಿಗೆ ಗಂಗಾಧರ ಎಚ್. ಇತರ ಆರೋಪಿಗಳೊಂದಿಗೆ ಸೇರಿ ವಂಚನೆ ಮಾಡಿರುವುದು ಗಮನಕ್ಕೆ ಬಂದಿದೆ. ರುಕ್ಕಯ್ಯ ಶೆಟ್ಟಿ ಅವರು ಖರೀದಿಸಲು ಒಪ್ಪಂದ ಮಾಡಿಕೊಂಡ ಜಾಗವನ್ನು ಅವರ ಗಮನಕ್ಕೆ ತಾರದೆಯೇ ಗಂಗಾಧರ ಎಚ್. ಇತರ ಆರೋಪಿಗಳಾದ ಕುಸುಮ ಸುವರ್ಣ ಮತ್ತು ನೀರಜಾಕ್ಷಿ ಅಗರ್‌ವಾಲ್ ಅವರೊಂದಿಗೆ ಸೇರಿಕೊಂಡು ಹಲವರಿಗೆ ಮಾರಾಟ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.