India-South Africa; ವನಿತೆಯರ ಟಿ20 ಸರಣಿ ಇಂದಿನಿಂದ
Team Udayavani, Jul 5, 2024, 6:54 AM IST
ಚೆನ್ನೈ: ಏಕದಿನ ಮತ್ತು ಏಕೈಕ ಟೆಸ್ಟ್ ಪಂದ್ಯದಲ್ಲಿ ಜಯಭೇರಿ ಬಾರಿಸಿರುವ ಭಾರತೀಯ ವನಿತಾ ತಂಡವು ಶುಕ್ರವಾರದಿಂದ ಆರಂಭವಾಗುವ ಮೂರು ಪಂದ್ಯಗಳ ಟಿ20 ಸರಣಿಯಲ್ಲೂ ಶ್ರೇಷ್ಠ ನಿರ್ವಹಣೆ ನೀಡುವ ಉತ್ಸಾಹದಲ್ಲಿದೆ. ಈ ಮೂಲಕ ಮುಂಬರುವ ಏಷ್ಯಾ ಕಪ್ ಮತ್ತು ಟಿ20 ವಿಶ್ವಕಪ್ಗೆ ಸಿದ್ಧಗೊಳ್ಳಲು ಬಯಸಿದೆ.
ಏಕದಿನ ಸರಣಿಯಲ್ಲಿ 0-3 ಅಂತರದ ಸೋಲು ಮತ್ತು ಏಕೈಕ ಟೆಸ್ಟ್ನಲ್ಲೂ ಸೋತು ಆಘಾತಕ್ಕೆ ಒಳಗಾಗಿರುವ ಲಾರಾ ವೂಲ್ವಾರ್ಡ್ ನೇತೃತ್ವದ ದಕ್ಷಿಣ ಆಫ್ರಿಕಾ ಪಡೆ ಟಿ20 ಸರಣಿಯಲ್ಲಾದರೂ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ.
ಜುಲೈ 19ರಿಂದ ಶ್ರೀಲಂಕಾದಲ್ಲಿ ಏಷ್ಯಾ ಕಪ್ ಮತ್ತು ಅಕ್ಟೋಬರ್ 4ರಿಂದ ಬಾಂಗ್ಲಾದೇಶದಲ್ಲಿ ಐಸಿಸಿ ಟಿ20 ವಿಶ್ವಕಪ್ ನಡೆಯುವ ಕಾರಣ ಭಾರತ ಟಿ20 ಸರಣಿಯನ್ನು ಹಗುರವಾಗಿ ಕಾಣುವ ಸಾಧ್ಯತೆಯಿಲ್ಲ. ಸರಣಿ ಗೆದ್ದು ಗೆಲುವಿನ ಆತ್ಮವಿಶ್ವಾಸದೊಂದಿಗೆ ಶ್ರೀಲಂಕಾಕ್ಕೆ ಪಯಣಿಸಲು ಹರ್ಮನ್ಪ್ರೀತ್ ಕೌರ್ ಪಡೆ ಯೋಚಿಸುತ್ತಿದೆ.
ಭಾರತೀಯ ವನಿತಾ ತಂಡ ಉತ್ತಮ ಫಾರ್ಮ್ನಲ್ಲಿದೆ. ತಂಡದ ಉಪನಾಯಕಿ ಮತ್ತು ಸ್ಟಾರ್ ಆಟಗಾರ್ತಿ ಸ್ಮತಿ ಮಂಧನಾ ಅಮೋಘವಾಗಿ ಆಡುತ್ತಿದ್ದಾರೆ. ಅವರಲ್ಲದೇ ಶಫಾಲಿ ಶರ್ಮ, ಜೆಮಿಮಾ, ರಿಚಾ ಘೋಷ್, ನಾಯಕಿ ಕೌರ್ ಈ ಹಿಂದಿನ ಏಕದಿನ ಮತ್ತು ಟೆಸ್ಟ್ನಲ್ಲಿ ಉತ್ತಮ ನಿರ್ವಹಣೆ ನೀಡಿದ್ದಾರೆ. ತಂಡದ ಬೌಲಿಂಗ್ ಕೂಡ ಉತ್ತಮ ಸ್ಥಿತಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ
Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.