Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ, 256.15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ
Team Udayavani, Jul 5, 2024, 1:05 AM IST
ಬೆಂಗಳೂರು: ಆನೇಕಲ್, ಹೊಸಕೋಟೆ ಸೇರಿ ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ತಲಾ ಒಂದು ಆಸ್ಪತ್ರೆ ನಿರ್ಮಿಸಲು ಸರಕಾರ ಉದ್ದೇಶಿಸಿದ್ದು, ಇದಕ್ಕೆ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿತು.
ನಬಾರ್ಡ್ ಯೋಜನೆ ಅಡಿ ಸುಮಾರು 256.15 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಆನೇಕಲ್, ಹೊಸಕೋಟೆ, ಖಾನಾಪುರ, ನೆಲಮಂಗಲ, ಶಿರಹಟ್ಟಿ, ಶೃಂಗೇರಿ, ಯಳಂದೂರಿನಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳ ಕಟ್ಟಡ ನಿರ್ಮಿಸಲು ಸರಕಾರ ನಿರ್ಧರಿಸಿದೆ. ಪ್ರಸಕ್ತ ಸಾಲಿನಲ್ಲೇ ಈ ಸಂಬಂಧದ ಕಾಮಗಾರಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್.ಕೆ.ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದಲ್ಲದೆ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರ (ಎನ್ಎಚ್ಎಂ)ಗಳನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.