H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ
ಹುಚ್ಚು ಹಿಡಿದಿರುವ ಕಾರಣ ಆಧಾರ ರಹಿತ ಆರೋಪ
Team Udayavani, Jul 6, 2024, 12:10 AM IST
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ. ಕೆಲವರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.
ಮುಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮುಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರ ರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಿಡಿ ಫ್ಯಾಕ್ಟರಿ ಅನಂತರ ಈಗ ಮುಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ, ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.