Union Budget: ಜು.22ರಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭ
ಪ್ರಧಾನಿ ಮೋದಿ ನೇತೃತ್ವದ 3.0 ಸರ್ಕಾರದ ಮೊದಲ ಬಜೆಟ್ ಜು. 23ರಂದು ಮಂಡನೆ
Team Udayavani, Jul 6, 2024, 5:46 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿ ಅಧಿಕಾರಕ್ಕೇರಿದ ಎನ್‌ಡಿಎ ಸರ್ಕಾರದ ಮೊದಲ ಬಜೆಟ್ ಸಂಸತ್ ಅಧಿವೇಶನ ಜು. 22ರಿಂದ ಆ. 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ (ಜುಲೈ 6) ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.
ಹೊಸ ಸರಕಾರದ ಪೂರ್ಣ ಬಜೆಟ್ ಮಂಡನೆ ಜು. 23ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದು, ಅಲ್ಲಿ ಆ. 12ರವರಗೆ ಬಜೆಟ್ ಮೇಲೆ ಹಾಗೂ ಅನೇಕ ವಿಚಾರಗಳಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.
“ಭಾರತದ ಸರ್ಕಾರದ ಶಿಫಾರಸಿನ ಮೇರೆಗೆ ಭಾರತದ ಗೌರವಾನ್ವಿತ ರಾಷ್ಟ್ರಪತಿಯವರು ಜು. 22, 2024 ರಿಂದ ಆಗಸ್ಟ್ 12, 2024 ರವರೆಗೆ ಬಜೆಟ್ ಅಧಿವೇಶನ ನಡೆಸಲು ಹಾಗೂ 2024 ಗಾಗಿ ಸಂಸತ್ತಿನ ಉಭಯ ಸದನ ಕರೆಯುವ ಪ್ರಸ್ತಾಪವನ್ನು ಅನುಮೋದಿಸಿದ್ದಾರೆ ಎಂದು ಹೇಳಿದ್ದಾರೆ. 2024–25ರ ಕೇಂದ್ರ ಬಜೆಟ್ ಅನ್ನು ಜುಲೈ 23, 2024 ರಂದು ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ” ಎಂದು ಕೇಂದ್ರ ಸಚಿವ ರಿಜಿಜು ಬರೆದುಕೊಂಡಿದ್ದಾರೆ.
Hon’ble President of India, on the recommendation of Government of India, has approved the proposal for summoning of both the Houses of Parliament for the Budget Session, 2024 from 22nd July, 2024 to 12 August, 2024 (Subject to exigencies of Parliamentary Business). Union Budget,…
— Kiren Rijiju (@KirenRijiju) July 6, 2024
18ನೇ ಲೋಕಸಭೆಯ ಹೊಸ ಸರಕಾರದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ. ಲೋಕಸಭಾ ಚುನಾವಣೆ ಪೂರ್ವದಲ್ಲಿ ಫೆ. 1ರಂದು ಮಧ್ಯಂತರ ಬಜೆಟ್ ಮಂಡಿಸಿದ್ದರು. ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ತೆರಿಗೆದಾರರಿಗೆ ಕೆಲವು ಸವಲತ್ತುಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.