MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Team Udayavani, Jul 6, 2024, 11:25 PM IST
ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣವನ್ನು ಸಿಬಿಐಗೆ ವಹಿಸಿದರೆ ಮಾತ್ರ ನಿಷ್ಪಕ್ಷ ತನಿಖೆ ಸಾಧ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಮೇಲ್ನೋಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪುತ್ರನ ನೇರಕ್ಕೆ ನಡೆದಿರುವ ಹಗರಣವಾಗಿದೆ. ತರಾತುರಿಯಲ್ಲಿ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿರುವುದು ಭ್ರಷ್ಟಾಚಾರದಲ್ಲಿ ತಾವು ಭಾಗಿ ಎಂಬುದನ್ನು ಸಾಬೀತುಪಡಿಸಿದೆ ಎಂದರು.
2014ರಿಂದ 2018ರಲ್ಲಿ ಇದರ ಪ್ರಮುಖ ಬೆಳವಣಿಗೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಮಗನ ಅನುಮತಿ ಇಲ್ಲದೆ ಇದು ನಡೆಯಲು ಸಾಧ್ಯವಿಲ್ಲ ಎಂಬುದು ಮೇಲ್ನೋಟಕ್ಕೆ ವ್ಯಕ್ತವಾಗುತ್ತಿದೆ. ಸ್ವಂತ ಲಾಭ ಮಾಡಿಕೊಳ್ಳಲು ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಏನೂ ಮಾಡಿಲ್ಲ ಅಂದರೆ ತರಾತುರಿಯಲ್ಲಿ ಜಿಲ್ಲಾ ಧಿಕಾರಿಯನ್ನು ಯಾವ ಕಾರಣಕ್ಕೆ ವರ್ಗಾವಣೆ ಮಾಡಿದ್ದೀರಿ ಎಂದು ಪ್ರಶ್ನಿಸಿದರು.
ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದಲ್ಲಿ ನೇರವಾಗಿ ಸಿಎಂ ಭಾಗಿಯಾಗಿದ್ದಾರೆ. ಈ ಪ್ರಕರಣಗಳನ್ನು ಮುಚ್ಚಿ ಹಾಕಲು ಸರಕಾರ ಮುಂದಾಗಿದೆ. ಇಷ್ಟು ದಿನ ಮಾಜಿ ಸಚಿವ ನಾಗೇಂದ್ರ ತಪ್ಪಿಸಿಕೊಳ್ಳಲು ಅವಕಾಶ ನೀಡಿ ಈಗ ನೋಟಿಸ್ ನೀಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
MUST WATCH
ಹೊಸ ಸೇರ್ಪಡೆ
Kota: ಪಾದಚಾರಿ ಮಾರ್ಗದಲ್ಲೂ ಹೊಂಡ!
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Mangalore: ಲೋವರ್ ಬೆಂದೂರ್‌ವೆಲ್-ಕರಾವಳಿ ವೃತ್ತ ರಸ್ತೆ ಅವ್ಯವಸ್ಥೆ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.