John Cena; ರಸ್ಲಿಂಗ್ ವೃತ್ತಿಜೀವನಕ್ಕೆ ವಿದಾಯ ಘೋಷಿಸಿದ WWE ಸೂಪರ್ ಸ್ಟಾರ್ ಜಾನ್ ಸೀನ
Team Udayavani, Jul 7, 2024, 8:12 AM IST
ಟೊರಾಂಟೊ: 16 ಬಾರಿಯ ವಿಶ್ವ ಚಾಂಪಿಯನ್, ಡಬ್ಲ್ಯೂ ಡಬ್ಲ್ಯೂಇ (WWE) ಸೂಪರ್ ಸ್ಟಾರ್ ಜಾನ್ ಸೀನ (John Cena) ಅವರು ಅಚ್ಚರಿಯ ಬೆಳವಣಿಗೆಯಲ್ಲಿ ವಿದಾಯ ಘೋಷಿಸಿದರು. 2025ರಲ್ಲಿ ರಿಂಗ್ ನಲ್ಲಿ ತನ್ನ ವೃತ್ತಿಜೀವನವನ್ನು ಕೊನೆಗೊಳಿಸುವುದಾಗಿ ಜಾನ್ ಸೀನ ಹೇಳಿದ್ದಾರೆ.
ಟೊರಾಂಟೊದಲ್ಲಿ ನಡೆದ ಮನಿ ಇನ್ ದಿ ಬ್ಯಾಂಕ್ ಲೈವ್ ಕಾರ್ಯಕ್ರಮದಲ್ಲಿ ಅಚ್ಚರಿಯ ಎಂಟ್ರಿ ಕೊಟ್ಟ ಜಾನ್ ಸೀನ ತನ್ನ ನಿರ್ಧಾರ ಪ್ರಟಿಸಿ ಅಭಿಮಾನಿ ವರ್ಗಕ್ಕೆ ಶಾಕ್ ನೀಡಿದರು. ಸೀನ ಧರಿಸಿದ್ದ ಟಿ ಶರ್ಟ್ ನಲ್ಲಿ ‘ ದಿ ಲಾಸ್ಟ್ ಟೈಮ್ ಈಸ್ ನೌ” ಎಂದು ಬರೆದಿತ್ತು.
ಸೆನಾ ಕಂಪನಿಯಿಂದ ನಿವೃತ್ತಿ ಘೋಷಿಸುವ ಮೊದಲು, ಟೊರೊಂಟೊದಲ್ಲಿ ಪ್ರೇಕ್ಷಕರಿಗೆ WWE ಹಾಲ್ ಆಫ್ ಫೇಮರ್ ಟ್ರಿಶ್ ಸ್ಟ್ರಾಟಸ್ ಪರಿಚಯಿಸಿದರು. 16 ಬಾರಿಯ ವಿಶ್ವ ಚಾಂಪಿಯನ್ ಜಾನ್ ಸೀನ ರಸಲ್ ಮೇನಿಯಾ 41 ದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಳ್ಳುವುದಾಗಿ ಹೇಳಿದ್ದಾರೆ.
“ಇಂದು ರಾತ್ರಿ, ನಾನು ಡಬ್ಲ್ಯೂ ಡಬ್ಲ್ಯೂಇ ನಿಂದ ನನ್ನ ನಿವೃತ್ತಿಯನ್ನು ಘೋಷಿಸುತ್ತೇನೆ” ಎಂದು ರಿಂಗ್‌ನೊಳಗೆ ಸೀನಾ ಹೇಳಿದರು.
BREAKING: @JohnCena announces retirement from in-ring competition, stating that #WrestleMania 41 in Las Vegas will be his last. pic.twitter.com/TB6U3QtO1h
— WWE (@WWE) July 7, 2024
ಸೀನ ಅವರು 2024ರ ರಾಯಲ್ ರಂಬಲ್, ಎಲಿಮಿನೇಶನ್ ಚೇಂಬರ್ ಮತ್ತು ರಸಲ್ ಮೇನಿಯಾ 41ರಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
2002ರಲ್ಲಿ ಡಬ್ಲ್ಯೂ ಡಬ್ಲ್ಯೂಇ ಕಂಪನಿಗೆ ಸೇರಿದ ಜಾನ್ ಸೀನ ಶೀಘ್ರದಲ್ಲಿ ಜನ ಮೆಚ್ಚುವ ಪಟುವಾಗಿ ಬೆಳೆದವರು. 13 ಬಾರಿ ಡಬ್ಲ್ಯೂ ಡಬ್ಲ್ಯೂಇ ಟೈಟಲ್, ಮೂರು ಬಾರಿ ಹೆವಿವೈಟ್ ಚಾಂಪಿಯನ್ ಶಿಪ್ ಮತ್ತು ಎರಡು ಬಾರಿ ರಾಯಲ್ ರಂಬಲ್ ಗೆಲುವು ಸಾಧಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಹಾಲಿವುಡ್ ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾರಣ ಡಬ್ಲ್ಯೂ ಡಬ್ಲ್ಯೂಇ ರಿಂಗ್ ನಲ್ಲಿ ಅಪರೂಪವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಬೆಂಗಳೂರು ಬುಲ್ಸ್ ಗೆ 18ನೇ ಸೋಲು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.