Bengaluru: ಅನಧಿಕೃತ ಕೇಬಲ್ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು
Team Udayavani, Jul 7, 2024, 11:07 AM IST
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್‌ಸಿ ಕೇಬಲ್, ಡಾಟಾ ಕೇಬಲ್ ಹಾಗೂ ಡಿಶ್ ಕೇಬಲ್‌ಗಳನ್ನು ಜುಲೈ 8ರ ಒಳಗೆ ತೆರವುಗೊಳಿಸುವಂತೆ ಬೆಸ್ಕಾಂ ಗಡುವು ನೀಡಿದೆ. ಒಂದು ವೇಳೆ ಅವಘಡ ಸಂಭವಿಸಿದ್ದಲ್ಲಿ ಆಯಾ ಕೇಬಲ್ ಸಂಸ್ಥೆಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದೆ.
ವಿದ್ಯುತ್ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಓಎಫ್ ಸಿ, ಕೇಬಲ್, ಡಾಟಾ ಕೇಬಲ್ ಹಾಗೂ ಡಿಶ್ ಕೇಬಲ್‌ಗಳನ್ನು ತೆರವುಗೊಳಿಸುವ ಸಂಬಂಧ ಬೆಸ್ಕಾಂ 2023ರ ಆಗಸ್ಟ್ ತಿಂಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿತ್ತು.
ಅನಧಿಕೃತ ಡಾಟಾ ಕೇಬಲ್, ಓಎಫ್‌ಸಿ ಕೇಬಲ್ ಹಾಗೂ ಡಿಶ್ ಕೇಬಲ್ ಗಳನ್ನು ತೆರವುಗೊಳಿಸಲು ಒಂದು ವಾರಗಳ ಗಡುವು ವಿಧಿಸಿತ್ತು. ಬೆಸ್ಕಾಂನ ವಿಶೇಷ ಕಾರ್ಯಾಚರಣೆ ಹೊರತಾಗಿಯೂ ಅನಧಿಕೃತ ಕೇಬಲ್ ಗಳನ್ನು ವಿದ್ಯುತ್ ಕಂಬಗಳ ಮೇಲೆ ಡಿಶ್ ಕೇಬಲ್ ಹಾಗೂ ಡಾಟಾ ಕೇಬಲ್ ಗಳನ್ನು ಅಳವಡಿಸಲಾಗುತ್ತಿದೆ. ಬೆಸ್ಕಾಂ ವಿದ್ಯುತ್ ಕಂಬಗಳಲ್ಲಿ ಹಾಕಿರುವ ಓಎಫ್‌ಸಿ, ಇಂಟರ್‌ನೆಟ್ ಡಾಟಾ ಕೇಬಲ್ ಹಾಗೂ ಡಿಶ್ ಕೇಬಲ್‌ಗಳನ್ನು ಸೋಮವಾರದೊಳಗೆ ತೆರವುಗೊಳಿಸುವಂತೆ ಖಡಕ್ ಸೂಚನೆ ನೀಡಿದೆ.
ಒಂದು ವೇಳೆ ಇಂಟರ್ ನೆಟ್ ಕಂಪನಿಗಳು ಹಾಗೂ ಡಿಶ್ ಕೇಬಲ್ ಅಪರೇಟರ್‌ಗಳು ತೆರವುಗೊಳಿಸದೇ ಇದ್ದಲ್ಲಿ ಬೆಸ್ಕಾಂ ಯಾವುದೇ ಮುನ್ಸೂಚನೆ ನೀಡದೆ ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯ ಕ್ರಮಕೈಗೊಳ್ಳಲಿದೆ ಎಂದು ಬೆಸ್ಕಾಂನ ಹಿರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅನಧಿಕೃತ ಕೇಬಲ್ ಗಳಿಂದ ವಿದ್ಯುತ್ ಅವಘಡಗಳು ಸಂಭವಿಸಿದ್ದಲ್ಲಿ ಸಂಬಂಧಿಸಿದ , ಓಎಫ್‌ಸಿ, ಡಾಟಾ ಕೇಬಲ್ , ಡಿಶ್ ಕೇಬಲ್ ಅಪರೇಟರ್‌ಗಳು ಅಥವಾ ವ್ಯಕ್ತಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.