![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 9, 2024, 11:24 PM IST
ಪುತ್ತೂರು: ಹನ್ನೊಂದು ವರ್ಷಗಳ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.
ಹರಿಯಾಣದ ಮೆಹನುವಾಡ್ ಜಿಲ್ಲೆಯ ನಗೀನ ತಾಲೂಕು ನಂಗಲ್ ಮವರಿಪುರ್ ಅಹಮ್ಮದ್ ಖಾನ್ ಅವರ ಪುತ್ರ ಮಹಮ್ಮದ್ ನಾಸೀರ್(35) ಬಂಧಿತ ಆರೋಪಿ. 2013ರಲ್ಲಿ ನಡೆದ ಅಪರಾಧ ಪ್ರಕರಣವೊಂದಕ್ಕೆ ಪ್ರಕರಣ ದಾಖಲಿಸಿಕೊಂಡಿದ್ದರು.
ಕಳೆದ 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ವಾರಂಟ್ ಜಾರಿಯಾಗಿತ್ತು. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.