Govt. ಡೆಂಗ್ಯೂಗೆ ಸಿದ್ದು ಮದ್ದು; ರಾಜ್ಯ ಮಟ್ಟದಲ್ಲಿ ಕಾರ್ಯಪಡೆ ರಚಿಸಿ

20 ತಾಸು ಸಭೆ ನಡೆಸಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕಟ್ಟುನಿಟ್ಟಿನ ಆದೇಶ

Team Udayavani, Jul 10, 2024, 6:50 AM IST

ಡೆಂಗ್ಯೂಗೆ ಸಿದ್ದು ಮದ್ದು; ರಾಜ್ಯ ಮಟ್ಟದಲ್ಲಿ ಕಾರ್ಯಪಡೆ ರಚಿಸಿ

ಬೆಂಗಳೂರು: ಡೆಂಗ್ಯೂ ನಿಯಂತ್ರಣಕ್ಕಾಗಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ.

ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಜತೆಗೆ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸುವಂತೆ ಬಿಜೆಪಿ ಆಗ್ರಹಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಈ ವಿಷಯ ಪ್ರಸ್ತಾವಿಸಿದ ಸಿಎಂ ಸಿದ್ದರಾಮಯ್ಯ, ಕಾರ್ಯಪಡೆ ರಚಿಸುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ಗೆ ಸೂಚಿಸಿದ್ದಾರೆ. ಸೊಳ್ಳೆ ಕಾಟ ಇರುವ ಕೊಳೆಗೇರಿಗಳಲ್ಲಿ ಉಚಿತ ಸೊಳ್ಳೆಪರದೆ ಒದಗಿಸುವಂತೆಯೂ ಸೂಚನೆ ನೀಡಲಾಗಿದೆ ಎಂದು ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರ ನೀಡಿದರು.

ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ತಜ್ಞರನ್ನು ಒಳಗೊಂಡ ಸಮಿತಿ ರಚಿಸ ಬೇಕು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್‌ ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಪ್ರತಿನಿತ್ಯ ಸಮನ್ವಯ ಸಭೆ ನಡೆಸಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪ್ರತೀ ಜಿಲ್ಲಾಸ್ಪತ್ರೆಯಲ್ಲಿ ಕನಿಷ್ಠ 10 ಹಾಸಿಗೆಗಳನ್ನು ಡೆಂಗ್ಯೂ ಪೀಡಿತರ ಚಿಕಿತ್ಸೆಗೆ ಮೀಸಲಿಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದರು.

ಮಳೆಗಾಲ ಮುಗಿಯುವ ತನಕ ಅಧಿಕಾರಿಗಳು ಪ್ರತಿದಿನ ಸಭೆಗಳನ್ನು ನಡೆಸಿ ಪರಿಶೀಲಿಸಬೇಕು. ಮುಂದಿನ ಎರಡು ತಿಂಗಳು ಕಟ್ಟೆಚ್ಚರದಿಂದ ಇರಬೇಕು. ಈ ಬಗ್ಗೆ ಡಿಸಿ, ಸಿಇಒ, ಡಿಎಚ್‌ಗಳು ನಿತ್ಯವೂ ಸಭೆ ನಡೆಸಿ, ಸಮನ್ವಯ ಸಾಧಿಸಬೇಕು. ಡೆಂಗ್ಯೂ ನಿಯಂತ್ರಣಕ್ಕೆ ಏನು ಮಾಡಬೇಕು, ಎಷ್ಟು ಹಣ ಅಗತ್ಯವಿದೆ ಎನ್ನುವುದನ್ನು ತಿಳಿಸಿ. ರಾಜ್ಯದಲ್ಲಿ ಇದುವರೆಗೆ 7,362 ಪ್ರಕರಣ ಪತ್ತೆ ಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ರಾಜ್ಯದಲ್ಲಿ ಆರೋಗ್ಯ ತುರ್ತು ಸ್ಥಿತಿ  ಘೋಷಿಸುವ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದರು.

ಸಿಇಒ, ಡಿಡಿಪಿಐ ವಿರುದ್ಧ ಕ್ರಮ
ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ವಿಸ್ತೃತ ಚರ್ಚೆ ನಡೆಸಲಾಗಿದ್ದು, ಈ ವರ್ಷ ಮೂರು ಪೂರಕ ಎಸೆಸೆಲ್ಸಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಿದ್ದೇನೆ. ಕಾಪಿ ಹೊಡೆಯುವುದನ್ನು ತಡೆಗಟ್ಟಿದ ಕಾರಣಕ್ಕೆ ಫ‌ಲಿತಾಂಶ ಕಡಿಮೆಯಾಗಿದೆ ಎಂಬ ವಾದ ಕೇಳಿ ಬಂದಿದೆ. ಆದರೆ ನನಗೆ ಸಮಾಧಾನವಿಲ್ಲ. ಪರಿಸ್ಥಿತಿ ಸುಧಾರಿಸಲು ಕ್ರಮ ತೆಗೆದುಕೊಳ್ಳ ಬೇಕು. ಇಲ್ಲವಾದರೆ ಸಿಇಒ, ಡಿಡಿಪಿಐ, ಬಿಇಒಗಳ ವಿರುದ್ಧ ಕ್ರಮ ತೆಗೆದು ಕೊಳ್ಳಲಾಗು ವುದು. ಪಿಯು ಸಹಿತ ಬಾಕಿ ಇರುವ 9,800 ಶಾಲಾ ಕಟ್ಟಡಗಳನ್ನು ಡಿಸೆಂಬರ್‌ ಒಳಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.

ಭೂನಿಧಿ
ಇಡೀ ರಾಜ್ಯದಲ್ಲಿ ಎಷ್ಟು ಸರಕಾರಿ ಭೂಮಿ ಇದೆ ಎಂಬ ಮಾಹಿತಿ ಸಂಗ್ರಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾ
ಗಿದೆ. ತಹಶೀಲ್ದಾರ್‌ ಕಚೇರಿ ಯಲ್ಲಿ ಈ ಬಗ್ಗೆ ಮಾಹಿತಿ ಇರಬೇಕು. ಸರ್ವೆ ಕಾರ್ಯ ಚುರುಕು ಗೊಳಿಸುವುದಕ್ಕಾಗಿ ಸದ್ಯದಲ್ಲೇ 750 ಸರ್ವೇಯರ್‌ಗಳನ್ನು ನೇಮಕ ಮಾಡಿ ಕೊಳ್ಳಲಾಗುವುದು. ಡಿಸಿ ಕೋರ್ಟ್‌ಗಳಲ್ಲಿ ಒಂದು ವರ್ಷಕ್ಕಿಂತ ಜಾಸ್ತಿ ಇರುವ ಪ್ರಕರಣಗಳ ಶೀಘ್ರ ವಿಲೇ ವಾರಿಗೆ ಸೂಚಿಸಲಾಗಿದೆ ಎಂದರು.

ಕಳೆದ ಬಾರಿ ತಾನು ನಡೆಸಿದ ಜನಸಂಪರ್ಕ ಸಭೆಗೆ 20 ಸಾವಿರ ಅರ್ಜಿಗಳು ಬಂದಿದ್ದು, 278 ಮಾತ್ರ ವಿಲೇ ವಾರಿಗೆ ಬಾಕಿ ಇವೆ. ಶೇ. 80ರಷ್ಟು ಗುಣಮಟ್ಟದ ವಿಲೇವಾರಿಯಾಗಿವೆ ಎಂದರು.

ಮೂರು ತಿಂಗಳಿಗೊಮ್ಮೆ ಸಭೆ
ಇನ್ನು ಮುಂದೆ ಪ್ರತೀ ಮೂರು ತಿಂಗಳಿಗೊಮ್ಮೆ ಅಧಿಕಾರಿಗಳ ಜತೆಗೆ ಇಂಥ ಸಭೆ ನಡೆಸಲಾಗುವುದು. ಸೆಪ್ಟಂಬರ್‌ನಲ್ಲಿ ಈ ಹಿಂದೆ ಸಭೆ ಸೇರಲಾಗಿತ್ತು. ಲೋಕಸಭಾ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಭೆ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ ಎಂದರು.

ಮತ್ತೆ ಜಾತಿ ಗಣತಿ ಪ್ರಸ್ತಾವ
ಆರ್ಥಿಕ ಹಾಗೂ ಸಾಮಾಜಿಕ ಗಣತಿ ವರದಿಯನ್ನು ಸರಕಾರ ಸ್ವೀಕರಿಸಿದೆ. ವರದಿಯನ್ನು ಇನ್ನೂ ಅಧ್ಯಯನ ಮಾಡದೆ ಇರುವುದರಿಂದ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಕಲಿ ಬಿಪಿಎಲ್‌ ಕಾರ್ಡ್‌ ಪತ್ತೆ ಹಚ್ಚುವುದಕ್ಕೆ ಆರ್ಥಿಕ ಹಾಗೂ ಸಾಮಾಜಿಕ ಗಣತಿ ವರದಿ ಅಧ್ಯಯನದಿಂದ ಅನುಕೂಲವಾಗುವುದಿಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ನಾನು ಇನ್ನೂ ವರದಿಯನ್ನು ಓದಿಲ್ಲ. ಓದದೆ ಹೇಗೆ ಹೇಳುವುದಕ್ಕೆ ಸಾಧ್ಯ? ಸಚಿವ ಸಂಪುಟ ಸಭೆಯಲ್ಲಿ ವರದಿ ಅಂಗೀಕಾರವಾಗಬೇಕು ಎಂದರು.

ವರ್ಷಾಂತ್ಯದೊಳಗೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಿಸಿ
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿ ಯರ ನೇಮಕಾತಿ ಪ್ರಕ್ರಿಯೆ ಯನ್ನು ವರ್ಷಾಂತ್ಯದೊಳಗೆ ಪೂರ್ಣ ಗೊಳಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ 4,180 ಹುದ್ದೆ ಗಳು ಹಾಗೂ ಸಹಾಯಕಿಯರ 9,411 ಹುದ್ದೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆ ಯನ್ನು ಡಿಸೆಂಬರ್‌ ಅಂತ್ಯದ ಒಳ ಗಾಗಿ ಪೂರ್ಣ ಗೊಳಿಸಬೇಕು. ನಗರ ಪ್ರದೇಶ ದಲ್ಲಿ ಸಹಾ ಯಕಿಯರ ಹುದ್ದೆ ಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿ ಎಂದರು.

ಡೆಂಗ್ಯೂ ನಿಯಂತ್ರಣಕ್ಕೆ ಸಿಎಂ ಸಿಎಂ ಸೂಚನೆಗಳು
-ಸೊಳ್ಳೆಕಾಟ ಇರುವ ಕೊಳೆಗೇರಿ ಗಳಲ್ಲಿ ಉಚಿತ ಸೊಳ್ಳೆಪರದೆ ವಿತರಣೆ ಮಾಡಬೇಕು.
-ಡಿಸಿ, ಸಿಇಒ, ಡಿಎಚ್‌ಒ ಪ್ರತಿನಿತ್ಯ ಸಮನ್ವಯ ಸಮಿತಿ ಸಭೆ ನಡೆಸಬೇಕು.
-ಪ್ರತೀ ಜಿಲ್ಲಾಸ್ಪತ್ರೆಯಲ್ಲಿ ಕನಿಷ್ಠ 10 ಹಾಸಿಗೆ ಡೆಂಗ್ಯೂ ಪೀಡಿತರ ಚಿಕಿತ್ಸೆಗೆ ಮೀಸಲಿಡಬೇಕು.
-ಮಳೆಗಾಲ ಮುಗಿಯುವವರೆಗೆ ಅಧಿ ಕಾರಿಗಳು ಪ್ರತಿದಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸ ಬೇಕು.

ಹೊಸ ಪ್ರವಾಸೋದ್ಯಮ
ನೀತಿ ರಚನೆ: ಸಿಎಂ
ಬೆಂಗಳೂರು: ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ಕರ್ನಾಟಕ ದಲ್ಲೂ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇದೆ. ಆದರೆ ನೆರೆಯ ಕೇರಳದಷ್ಟು ಕೂಡ ನಮ್ಮಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಆಗಿಲ್ಲ. ಇದಕ್ಕಾಗಿ ಸಮಗ್ರ ನೀಲನಕ್ಷೆ ಸಿದ್ಧಪಡಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.

ಸ್ಮಾರಕಗಳ ಮಹತ್ವ ಅರಿತ
ಗೈಡ್‌ಗಳ ನೇಮಕಕ್ಕೆ ಸಚಿವ ಪಾಟೀಲ್‌ ಸೂಚನೆ
ಬೆಂಗಳೂರು: ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಸ್ಮಾರಕಗಳ ಮಹತ್ವ ಅರಿತ ಗೈಡ್‌ಗಳನ್ನು ನೇಮಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದರು. ಪ್ರವಾಸಿ ತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಕುರಿತ ಜಿಲ್ಲಾವಾರು ಮಾಸ್ಟರ್‌ ಪ್ಲ್ರಾನ್‌ ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

Congress: ಸುಳ್ಳು ಗ್ಯಾರಂಟಿಗೆ 3 ರಾಜ್ಯ ನಾಶ: ಪ್ರಧಾನಿ ಮೋದಿ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

PM Modi: ಜನರ ಸಮಸ್ಯೆ ವಿಷಯ ಮಾತಾಡಲಿ: ಮಲ್ಲಿಕಾರ್ಜುನ ಖರ್ಗೆ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

OM BIrla

Waqf ಸಮಿತಿಯಿಂದ ದೂರ: ಇಂದು ಸ್ಪೀಕರ್‌ ಜತೆ ವಿಪಕ್ಷ ಚರ್ಚೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

current

Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು

mob

WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್‌ ಅಧಿಕಾರಿ ದೂರು

AANE 2

Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

ವಕ್ಫ್  ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.