Bengaluru: ಎಂ.ಜಿ.ರೋಡ್‌ನಲ್ಲಿ ಹೊತ್ತಿ ಉರಿದ ಬಿಎಂಟಿಸಿ ಬಸ್!
Team Udayavani, Jul 10, 2024, 11:08 AM IST
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಆದರೆ, ಚಾಲಕ ಮತ್ತು ನಿರ್ವಾಹಕನ ಸಮಯ ಪ್ರಜ್ಞೆಯಿಂದ ಹತ್ತಾರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಭಾರೀ ಅನಾಹುತ ತಪ್ಪಿದೆ.
ಮಂಗಳವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಬಿಎಂಟಿಸಿ ಬಸ್‌ವೊಂದು ರೋಸ್ ಗಾರ್ಡನ್‌ನಿಂದ ಶಿವಾಜಿನಗರಕ್ಕೆ ಹೊರಟಿತ್ತು. ಮಾರ್ಗ ಮಧ್ಯೆ ಎಂ.ಜಿ ರಸ್ತೆಯ ಅನಿಲ್ ಕುಂಬ್ಳೆ ಸಿಗ್ನಲ್‌ನಲ್ಲಿ ಚಾಲಕ ಬಸ್ ನಿಲ್ಲಿಸಿದ್ದರು. ಸಿಗ್ನಲ್ ಬಿಟ್ಟಾಗ ಬಸ್ ಸ್ಟಾರ್ಟ್ ಮಾಡಲು ಚಾಲಕ ಯತ್ನಿಸಿದಾಗ ಅದು ಸಾಧ್ಯವಾಗಿಲ್ಲ. ನಾಲ್ಕೈದು ಬಾರಿ ಸ್ಟಾರ್ಟ್ ಮಾಡಲು ಯತ್ನಿಸಿದರೂ ಸ್ಟಾರ್ಟ್ ಆಗಿಲ್ಲ. ಈ ಸಂದರ್ಭದಲ್ಲಿ ಏಕಾಏಕಿ ಎಂಜಿನ್‌ನಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, ಸಣ್ಣ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಚಾಲಕ ಮತ್ತು ನಿರ್ವಾಹಕ ಎಚ್ಚೆತ್ತು ಬಸ್‌ನಲ್ಲಿದ್ದ ಸುಮಾರು 30 ಮಂದಿ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆ ಬಳಿಕ ಕೆಲವೇ ಹೊತ್ತಿನಲ್ಲಿ ಬೆಂಕಿಯ ಕಿನ್ನಾಲಿಗೆ ಇಡೀ ಬಸ್‌ಗೆ ಆವರಿಸಿದ್ದು, ನೋಡ ನೋಡುತ್ತಿದ್ದಂತೆ ಪೂರ್ತಿ ಬಸ್ ಹೊತ್ತಿ ಉರಿದಿದೆ. ಸುದ್ದಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ 2 ವಾಹನಗಳ ಜತೆ ಸ್ಥಳಕ್ಕೆ ಆಗಮಿಸಿ ಸುಮಾರು ಒಂದೂವರೆ ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.
ಸಂಚಾರ ದಟ್ಟಣೆ: ಜನನಿಬಿಡ ಪ್ರದೇಶವಾದ ಎಂ.ಜಿ ರಸ್ತೆಯಲ್ಲಿ ಬಿಎಂಟಿಸಿ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 1 ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿ ಪ್ರಯಾಣಿಕರು ಪರದಾಡಿದರು. ಕೂಡಲೇ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರ್ಯಾಯ ಮಾರ್ಗದಲ್ಲಿ ವಾಹನಗಳ ಕಳುಹಿಸಿ ಸಂಚಾರ ಸುಗಮಗೊಳಿಸಿದರು. ಸ್ಥಳಕ್ಕೆ ಬಿಎಂಟಿಸಿ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.