![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 10, 2024, 8:48 PM IST
ಸಾಗರ: ಶಾಸಕ ಗೋಪಾಲಕೃಷ್ಣ ಬೇಳೂರು ಅವರದ್ದು ಚೇಳಿನ ಬುದ್ಧಿ. ತನಗೆ ಸಹಾಯ ಮಾಡಿದವರಿಗೂ ಕುಟುಕುವ ಬುದ್ಧಿ ಹೊಂದಿರುವ ಬೇಳೂರು ಚುನಾವಣೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಕಾಗೋಡು ತಿಮ್ಮಪ್ಪ ಅವರನ್ನೂ ಬಿಟ್ಟಿಲ್ಲ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ವ್ಯಂಗ್ಯವಾಡಿದ್ದಾರೆ.
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡವರ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಈ ಚೇಳಿನ ಕೈನಲ್ಲಿ ಹಿಂದೆ ನಾವೆಲ್ಲಾ ಕುಟುಕಿಸಿಕೊಂಡಿದ್ದೇವೆ. ಸರ್ಕಾರ ಕಾಗೋಡು ತಿಮ್ಮಪ್ಪ ಅವರ ಸ್ವಾಧೀನದಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿಗೆ ಜಾಗ ಮಂಜೂರು ಮಾಡಿದೆ.
ಗೋಪಾಲಕೃಷ್ಣ ಬೇಳೂರು ತಾವು ಗೆದ್ದ ನಂತರ ಆ ಜಾಗ ವಶಕ್ಕೆ ಪಡೆಯುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಹಿಂದೆ ಕಂಸ, ಧ್ವಂಸ ಎಂದು ಕಾಗೋಡು ತಿಮ್ಮಪ್ಪರನ್ನು ಟೀಕಿಸಿದ್ದರು. ಆದರೂ ಕಾಗೋಡು ತಿಮ್ಮಪ್ಪ ಅವರು ಬೇಳೂರು ಗೆಲುವಿಗೆ ಶ್ರಮಿಸಿದ್ದಾರೆ. ಅಂತಹವರ ಕಾಲೇಜಿಗೆ ಸರ್ಕಾರ ನೀಡಿದ ಜಾಗವನ್ನು ವಾಪಸ್ ಪಡೆಯಿರಿ ಎಂದು ಪತ್ರ ಬರೆದಿರುವ ದಾಖಲೆ ನನ್ನ ಬಳಿ ಇದೆ. ಇದನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಪಕ್ಷದ ಪ್ರಮುಖರು ಮಾಡಬೇಕು ಎಂದರು.
ಜಿಪಂ, ತಾಪಂ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿ:
ಅಭಿವೃದ್ಧಿ ವಿಷಯವಾಗಿ ಹಣ ತಂದಿದ್ದು ತಾವೇ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಅವರು ಅಭಿವೃದ್ಧಿಗೆ ಯಾವ ರೀತಿ ಹಣ ತಂದಿದ್ದಾರೆ ಎನ್ನುವುದು ಮುಂದಿನ ದಿನಗಳಲ್ಲಿ ಬಹಿರಂಗಪಡಿಸಲಾಗುತ್ತದೆ. ಪಕ್ಷದ ಮುಖಂಡರು ಕಾರ್ಯಕರ್ತರು ಯಾವುದಕ್ಕೂ ಹಿಂದೆ ಸರಿಯದೆ ಪಕ್ಷ ಸಂಘಟನೆಗೆ ತೊಡಗಿಕೊಳ್ಳಬೇಕು. ಮುಂದಿನ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷ ಗೆಲ್ಲಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ನಡೆಸಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಡಾ. ರಾಜನಂದಿನಿ, ಗಣೇಶಪ್ರಸಾದ್, ದೇವೇಂದ್ರಪ್ಪ ಯಲಕುಂದ್ಲಿ, ಮಧುರಾ ಶಿವಾನಂದ್, ವಿ.ಮಹೇಶ್, ಜನಾರ್ದನ ಉಡುಪ ಇನ್ನಿತರರು ಹಾಜರಿದ್ದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.