By-Election: ಉತ್ತರಾಖಂಡ, ಬಂಗಾಳದಲ್ಲಿ ಹಿಂಸಾಚಾರ…
Team Udayavani, Jul 10, 2024, 11:13 PM IST
ನವದೆಹಲಿ: 7 ರಾಜ್ಯಗಳ 13 ವಿಧಾನಸಭೆಗಳಿಗೆ ಬುಧ ವಾರ ಉಪ ಚುನಾವಣೆ ನಡೆಯಿತು. ಈ ವೇಳೆ ಉತ್ತ ರಾಖಂಡ, ಪಶ್ಚಿಮ ಬಂಗಾಳದಲ್ಲಿ ಹಿಂಸಾ ಚಾರದ ಘಟನೆ ನಡೆದಿವೆ. ಲೋಕ ಸಭೆ ಚುನಾವಣೆ ಬಳಿಕ ನಡೆದ ಮೊದಲ ಉಪ ಚುನಾವಣೆಯಲ್ಲಿ ಹಲವು ಪ್ರಮುಖ ನಾಯಕರು ಸ್ಪರ್ಧಿಸಿದ್ದರು. ಪಶ್ಚಿಮ ಬಂಗಾಳದ 4, ಹಿಮಾಚಲ ಪ್ರದೇಶದ 3, ಉತ್ತರ ಪ್ರದೇಶದ 2, ತಮಿಳುನಾಡು, ಮಧ್ಯಪ್ರದೇಶ, ಪಂಜಾಬ್, ಬಿಹಾರಗಳಲ್ಲಿನ ತಲಾ 1 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆದಿತ್ತು.
ಉತ್ತರಾಖಂಡದ ಮಂಗಲೂರಿನಲ್ಲಿ ನಡೆದ ಹಿಂಸಾಚಾರದಲ್ಲಿ 4 ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ಬೂತ್ನಲ್ಲಿ ಬೆಂಕಿ ಹಚ್ಚಲಾಗಿತ್ತು ಎಂದು ಸಹ ವರದಿಗಳು ತಿಳಿಸಿವೆ. ಪಶ್ಚಿಮ ಬಂಗಾಳದ ಬಾಗ್ಧಾಹ್ ಮತ್ತು ರಣಘಾಟ್ ದಕ್ಷಿಣ ಕ್ಷೇತ್ರಗಳಲ್ಲಿ ಹಿಂಸಾಚಾರ ನಡೆದಿದೆ. ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಜಟಾಪಟಿಗಳು ನಡೆದಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ತನ್ನ ವಿರುದ್ಧ ಹುರುಳಿಲ್ಲದ ಆರೋಪಗಳನ್ನು ಮಾಡ ಲಾಗುತ್ತಿದೆ ಎಂದು ಹೇಳಿದೆ. ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಪತ್ನಿ ಕಮಲೇಶ್ ಠಾಕೂರ್ ಸ್ಪರ್ಧಿಸಿದ್ದರು. ಶಾಸಕರ ಸಾವು ಮತ್ತು ರಾಜೀನಾಮೆಯ ಹಿನ್ನೆಲೆಯಲ್ಲಿ ಈ ಚುನಾವಣೆಯನ್ನು ನಡೆಸಲಾಗಿತ್ತು. ಜು. 13ರಂದು ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.