ʼಸ್ಪಾʼ ಮಾಲೀಕನಿಂದ ಸುಲಿಗೆ ಪ್ರಕರಣ: ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಅರೆಸ್ಟ್

Team Udayavani, Jul 11, 2024, 1:31 PM IST

ʼಸ್ಪಾʼ ಮಾಲೀಕನಿಂದ ಸುಲಿಗೆ ಪ್ರಕರಣ: ತಲೆಮರೆಸಿಕೊಂಡಿದ್ದ ದಿವ್ಯ ವಸಂತ ಕೇರಳದಲ್ಲಿ ಅರೆಸ್ಟ್

ಬೆಂಗಳೂರು: ಸ್ಪಾ ಮಾಲೀಕನೊಬ್ಬನಿಗೆ ಬೆದರಿಕೆ ಹಾಕಿ ಸುಲಿಗೆ (Extortion) ಮಾಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ನಿರೂಪಕಿ ದಿವ್ಯ (Divya Vasanth) ವಸಂತರನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನೊಬ್ಬನಿಗೆ ಬೆದರಿಕೆ ಹಾಗೂ ಬ್ಲ್ಯಾಕ್‌ ಮೇಲ್‌ ಮಾಡಿ ಅವರಿಂದ 15 ಲಕ್ಷ ರೂ. ಸುಲಿಗೆಗೆ ಯತ್ನಿಸಿದ ಪ್ರಕರಣದಲ್ಲಿ ದಿವ್ಯ ವಸಂತ್‌ ರನ್ನು ಜೀವನ್ ಭೀಮಾನಗರ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ಈಗಾಗಲೇ ಖಾಸಗಿ ಸುದ್ದಿ ವಾಹಿನಿಯ ಕಾರ್ಯನಿರ್ವಾಹಕರಾಗಿದ್ದ ರಾಜಾನುಕುಂಟೆ ವೆಂಕಟೇಶ್, ದಿವ್ಯ ತಮ್ಮ ಸಂದೇಶ್ ರನ್ನು ಬಂಧಿಸಲಾಗಿದೆ.

ಪ್ರಕರಣದ ಹಿನ್ನೆಲೆ:  ದಿವ್ಯ ವಸಂತ್‌ ಹಾಗೂ ತಂಡ ಸೇರಿಕೊಂಡು ವ್ಯಾಟ್ಸಾಪ್‌ ನಲ್ಲಿ ʼಸ್ಪೈ ರಿಸರ್ಚ್ ಟೀಂ’ ಹೆಸರಿನ ಗ್ರೂಪ್ ನ್ನು ಮಾಡಿಕೊಂಡಿದ್ದರು. ಇದರಲ್ಲಿ ಹಣವುಳ್ಳ ಸಿರಿವಂತರನ್ನು ಗುರಿಯಾಗಿಸಿಕೊಂಡು ಅವರನ್ನು ಬ್ಲ್ಯಾಕ್‌ ಮೇಲ್(Black mail) ಅವರಿಂದ ಸುಲಿಗೆ ಮಾಡುವುದು ಹೇಗೆನ್ನುವ ಯೋಜನೆಯ ಬಗ್ಗೆ ಚರ್ಚೆ ನಡೆಯುತ್ತಿತ್ತು.

ಇಂದಿರಾನಗರದ  ‘ಸ್ಪಾ’ ವೊಂದಕ್ಕೆ ವೆಂಕಟೇಶ್‌ ಹಾಗೂ ದಿವ್ಯಾ ತಂಡ ಈಶಾನ್ಯ ರಾಜ್ಯದ ಯುವತಿಯನ್ನು ಕೆಲಸಕ್ಕೆ ಸೇರಿಸಿದ್ದರು. ಈ ಸ್ಪಾಗೆ ಗ್ರಾಹಕನಂತೆ ದಿವ್ಯ ಸಹೋದರ ಸಂದೇಶ ರಹಸ್ಯ ಕ್ಯಾಮೆರಾವೊಂದನ್ನು ಹಿಡಿದುಕೊಂಡು ಮಸಾಜ್‌ ಗೆಂದು ಹೋಗಿದ್ದ. ಆ ಬಳಿಕ ಅದೇ ಯುವತಿಯೊಂದಿಗೆ ಸಲುಗೆಯಿಂದ ಇರುವ ವಿಡಿಯೋವೊಂದನ್ನು ರೆಕಾರ್ಡ್‌ ಮಾಡಿದ್ದ. ಇದನ್ನು ಸ್ಪಾ ಮಾಲೀಕನಿಗೆ ಕಳುಹಿಸಿ ನಿಮ್ಮ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಇದನ್ನು ಟಿವಿಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಸಿದ್ದರು. 15 ಲಕ್ಷ ರೂ. ಕೊಡಿ ಇಲ್ಲದಿದ್ರೆ ನೇರ ಟಿವಿಯಲ್ಲಿ ಈ ದೃಶ್ಯವನ್ನು ಪ್ರಸಾರ ಮಾಡುತ್ತೇವೆ ಎಂದು ಬೆದರಿಕೆ ಹಾಕಿ ಸುಲಿಗೆಗೆ ಯತ್ನಿಸಿದ್ದರು.

ಇವರ ಸುಲಿಗೆಯ ಬಲೆಗೆ ಬಿದ್ದ  ʼಸ್ಪಾʼ ಮಾಲೀಕನಿಂದ  ಗ್ಯಾಂಗ್ 1 ಲಕ್ಷ ರೂ. ಸುಲಿಗೆ ಮಾಡಿದ್ದು, ಈ ಸಂಬಂಧ ಸ್ಪಾ ಮಾಲೀಕ ದೂರಿನ ಮೇರೆಗೆ ಪೊಲೀಸರು ಎಫ್‌ ಐಆರ್‌ ದಾಖಲಿಸಿಕೊಂಡು ವೆಂಕಟೇಶ್‌ ಹಾಗೂ ಸಂದೇಶ್‌ ಅವರನ್ನು ಬಂಧಿಸಿದ್ದರು.

ಇದಾದ ಬಳಿಕ ಪ್ರಕರಣದ ಮತ್ತೊಂದು ಆರೋಪಿ ದಿವ್ಯ ವಸಂತ್‌ ಅವರನ್ನು ಪೊಲೀಸರು ಹುಡುಕಲು ಶುರು ಮಾಡಿದ್ದರು. ಆದರೆ ದಿವ್ಯ ಪರಾರಿ ಆಗಿದ್ದರು. ತಮಿಳುನಾಡಿನಿಂದ, ಕೇರಳಕ್ಕೆ ಹೋಗಿರುವ ಮಾಹಿತಿ ಪಡೆದ ಪೊಲೀಸರು ಕೇರಳದಲ್ಲಿ ದಿವ್ಯರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ದಿವ್ಯ & ಟೀಮ್‌ 100ಕ್ಕೂ ಅಧಿಕ ಮಂದಿಗೆ ಈ ರೀತಿ ಸುಲಿಗೆ ಮಾಡಿ ಹಣ ಲೂಟಿದೆ ಎನ್ನಲಾಗಿದೆ.

ಖಾಸಗಿ ಟಿವಿ ವಾಹಿನಿಯಲ್ಲಿ ನಿರೂಪಕಿಯಾಗಿದ್ದ ದಿವ್ಯ ವಸಂತ ʼಇಡೀ ರಾಜ್ಯವೇ ಖುಷಿ ಪಡುವ ಸುದ್ದಿʼ ಎಂದೇಳಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದಳು. ʼಗಿಚ್ಚಿ ಗಿಲಿ ಗಿಲಿʼ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಳು.

ಟಾಪ್ ನ್ಯೂಸ್

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

ಸಿಎಂ ಗೆ ರೈತ ಬಗ್ಗೆ ಕಾಳಜಿ ಇದ್ದರೆ ವಕ್ಫ್‌ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ

ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್‌ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

Director Guruprasad: ಖ್ಯಾತ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆ*ತ್ಮಹತ್ಯೆ

Director Guruprasad: ಖ್ಯಾತ ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆ*ತ್ಮಹತ್ಯೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.