Kalaburagi; ಬಿಬಿಎಂಪಿ ಸಹಾಯಕ ಆಯುಕ್ತರ ಮನೆಯಲ್ಲಿ ಹುಲಿ ಉಗುರು, ಕ್ಯಾಸಿನೋ ಕಾಯಿನ್ ಪತ್ತೆ
Team Udayavani, Jul 11, 2024, 4:22 PM IST
ಕಲಬುರಗಿ: ಬಿಬಿಎಂಪಿಯ ಸಹಾಯಕ ಆಯುಕ್ತ ಬಸವರಾಜ ಮಗ್ಗಿ ಅವರ ಕಲಬುರಗಿ ನಗರದ ಮನೆಯಲ್ಲಿ ಸುಮಾರು 12.50 ಲಕ್ಷ ಮೌಲ್ಯದ ಕ್ಯಾಸಿನೊ ಕಾಯಿನ್ ಗಳು ಪತ್ತೆಯಾದ ಬೆನ್ನಲೇ ಲೋಕಾಯುಕ್ತ ಪೊಲೀಸರಿಗೆ ಕ್ಯಾಸಿನೊ ಕಾಯಿನ್ಗಳ ಮತ್ತೊಂದು ಸೂಟ್ ಕೇಸ್ ಸಿಕ್ಕಿದೆ.
ಬೆಳಿಗ್ಗೆ ಸುಮಾರು ₹12.50 ಲಕ್ಷ ಮೌಲ್ಯದ ಕ್ಯಾಸಿನೊ ಕಾಯಿನ್ ಗಳು ಪತ್ತೆಯಾಗಿದ್ದವು. ಈಗ ಸೂಟ್ ಕೇಸ್ನಲ್ಲಿ ₹50 ಸಾವಿರದಿಂದ ₹1 ಲಕ್ಷ ಮೌಲ್ಯದ ವರೆಗಿನ ಕ್ಯಾಸಿನೊ ಕಾಯಿನ್ಗಳು ಸಿಕ್ಕಿವೆ ಎಂದು ತಿಳಿದುಬಂದಿದೆ.
ಸೂಟ್ ಕೇಸ್ನಲ್ಲಿ ನೀಟಾಗಿ ಜೋಡಿಸಿ ಇಟ್ಟಿರುವ ಕ್ಯಾಸಿನೊ ಕಾಯಿನ್ಗಳ ಮೌಲ್ಯವನ್ನು ಲೆಕ್ಕ ಹಾಕಲಾಗುತ್ತಿದೆ. ದಾಖಲೆಗಳ ತಪಾಸಣೆಯ ವೇಳೆ ಎರಡು ಹುಲಿ ಉಗುರು ಸಹ ಸಿಕ್ಕಿವೆ. ಹುಲಿ ಉಗುರಿನ ಸತ್ಯಾಸತ್ಯತೆ ತಿಳಿಯಲು ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರೆಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಂ.ಬಿ ನಗರದ ಬಸವರಾಜ ಅವರ ಮನೆಯಲ್ಲಿ ಲೋಕಾಯುಕ್ತ ಎಸ್.ಪಿ ಜಾನ್ ಆಂಟೋನಿ ಅವರ ನೇತೃತ್ವದ ಅಧಿಕಾರಿಗಳ ತಂಡ ಬೆಳಿಗ್ಗೆಯಿಂದ ಕಡತಗಳ ಪರಿಶೀಲನೆ, ಮನೆಯ ತಪಾಸಣೆ ಮಾಡುತ್ತಿದೆ.
ಡಿ.ಎಸ್.ಪಿ ಮಂಜುನಾಥ್, ಇನ್ಸ್ಪೆಕ್ಟರ್ ಹನುಮಂತ್ ಸನ್ಮನಿ, ಪೊಲೀಸ್ ಸಿಬ್ಬಂದಿಗಳು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.