MUDA: ಇಂದು ಮೈಸೂರಲ್ಲಿ ಕಾಂಗ್ರೆಸ್ Vs ಬಿಜೆಪಿ ಹೋರಾಟ
ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿಯಿಂದ ಮುಡಾಕ್ಕೆ ಮುತ್ತಿಗೆಗೆ ಸಿದ್ಧತೆ
Team Udayavani, Jul 12, 2024, 12:08 AM IST
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಸಂಬಂಧ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ಜು. 11ರಂದು ಮುಡಾ ಮುತ್ತಿಗೆಗೆ ಸಿದ್ಧತೆ ನಡೆಸಿದ್ದರೆ, ಇತ್ತ ಕಾಂಗ್ರೆಸ್ ಕೂಡ ಬಿಜೆಪಿ ಪ್ರತಿಭಟನಕಾರರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದೆ.
ಈ ಸಂಬಂಧ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸಿ.ಟಿ. ರವಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಮುಡಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದ್ದರೆ, ಇನ್ನೊಂದೆಡೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಮುಡಾಕ್ಕೆ ಮುತ್ತಿಗೆ ಹಾಕುವ ಬಿಜೆಪಿಯವರಿಗೆ ನಾವು ಮುತ್ತಿಗೆ ಹಾಕುತ್ತೇವೆ ಎಂದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮುಡಾ ಎದುರು ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
10 ಸಾವಿರ ಕಾರ್ಯಕರ್ತರು ಭಾಗಿ
ಮುಡಾ ಹಗರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜು. 12ರಂದು ಮೈಸೂರಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಸಭೆ ನಡೆಯಲಿದೆ. ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳಿಂದ 10 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ತಿಳಿಸಿದರು.
ನಗರದ ಡಿ. ದೇವರಾಜ ಅರಸು ರಸ್ತೆ, ಸಯ್ನಾಜಿರಾವ್ ರಸ್ತೆಯ ವ್ಯಾಪಾರಿಗಳು 2 ಗಂಟೆ ಕಾಲ ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಹೋರಾಟಕ್ಕೆ ಬೆಂಬಲ ಸೂಚಿಸಬೇಕು. ನಿವೇಶನಾಕಾಂಕ್ಷಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು ನಮ್ಮ ಕೈ ಬಲಪಡಿಸಬೇಕು ಎಂದರು.
ಬಿಜೆಪಿಯವರಿಗೆ ನಾವೂ ಮುತ್ತಿಗೆ ಹಾಕುತ್ತೇವೆ: ಲಕ್ಷ್ಮಣ್
ಮೈಸೂರು: ಮುಡಾ ಕಚೇರಿಗೆ ಮುತ್ತಿಗೆ ಹಾಕುವ ಬಿಜೆಪಿಯವರಿಗೆ ನಾವೂ ಮುತ್ತಿಗೆ ಹಾಕುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಿಜೆಪಿಯವರು ಮುಡಾ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಜು. 12ರಂದು ಬೆಳಗ್ಗೆ 10ಕ್ಕೆ ಮುಡಾ ಆವರಣದಲ್ಲಿ ಪ್ರತಿಭಟನೆ ಮಾಡುತ್ತೇವೆ. 20 ದಿನಗಳಿಂದ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಲೋಪವಾಗಿಲ್ಲ. ಲೋಪವಾಗಿದ್ದರೆ ದಾಖಲೆ ಬಿಡುಗಡೆ ಮಾಡಲಿ. ಬಿಜೆಪಿ ವಿರುದ್ಧದ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಶಾಸಕರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಮುಡಾ ನೀಡಿರುವ ಬದಲಿ ನಿವೇಶನ ವಿಚಾರದಲ್ಲಿ ಬಿಜೆಪಿ ಯವರು ರಾಜಕೀಯವಾಗಿ ಪ್ರತಿಭಟನೆ ಮಾಡುತ್ತಿದ್ದು, ಅವರಂತೆ ನಮಗೂ ರಾಜಕೀಯವಾಗಿ ಪ್ರತಿರೋಧ ನೀಡಲು ತಿಳಿದಿದೆ. ಹಗರಣದ ವಿರುದ್ಧವಾಗಿ ಬಿಜೆಪಿ ನಾಯಕರು ಜೆ.ಪಿ. ನಡ್ಡಾ ಅಧ್ಯಕ್ಷತೆಯಲ್ಲೇ ಪ್ರತಿಭಟನೆ ಮಾಡಲಿ.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಮುಖ್ಯಮಂತ್ರಿಗಳ ಪತ್ನಿಗೆ ಪರ್ಯಾಯವಾಗಿಯಷ್ಟೇ ನಿವೇಶನ ನೀಡಲಾಗಿದೆ ಎಂದಾದಲ್ಲಿ, ಒಟ್ಟು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ ಕ್ಲೀನ್‌ಚಿಟ್ ಪಡೆದುಕೊಳ್ಳಲಿ.
-ಯದುವೀರ್ ಒಡೆಯರ್ ಮೈಸೂರು-ಕೊಡಗು ಸಂಸದ
ಮುಡಾ ಹಗರಣ ಬಿಜೆಪಿ ಯವರ ಕಾಲದಲ್ಲೇ ಎಲ್ಲ ಆಗಿದೆ. ಇದೀಗ ಅವರೇ ಹೋರಾಟ ಮಾಡುತ್ತಿದ್ದಾರೆ. ನೂರು ಸುಳ್ಳು ಹೇಳಿ, ಅದನ್ನು ಸತ್ಯ ಮಾಡಲು ಹೊರಟಿದ್ದಾರೆ. ಮುಡಾದಲ್ಲಿ ಯಾರು ತಪ್ಪು ಮಾಡಿದ್ದರೂ ತನಿಖೆ ಮುಗಿಯುವವರೆಗೂ ಕಾಯಬೇಕು.
– ಕೆ.ಜೆ. ಜಾರ್ಜ್, ಇಂಧನ ಸಚಿವ
ಮೂರು ತಿಂಗಳ ಅವಧಿಯಲ್ಲಿ ಮುಡಾದಲ್ಲಿ 50:50 ಅನುಪಾತದ ನಿವೇಶನ ಹಂಚಿಕೆಯು ಹೆಚ್ಚಾಗಿದೆಯೇ ಹೊರತು ಹಿಂದಿನ ವರ್ಷಗಳಲ್ಲಿ ಇಷ್ಟು ಪ್ರಮಾಣದಲ್ಲಿ ಆಗಿಲ್ಲ. ಹಗರಣ ಕುರಿತು ಸದನದಲ್ಲಿ ನಮ್ಮ ಹೋರಾಟ ಯಾವ ರೀತಿ ನಡೆಯುತ್ತದೆ ಎನ್ನುವುದು ಕಾದು ನೋಡಿ.
-ಜಿ.ಟಿ. ದೇವೇಗೌಡ
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ
ಅಪವಾದ ಬಂದಾಗ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಿದ ಇತಿಹಾಸವಿದೆ. ಅಂತೆಯೇ ಮುಡಾ ಹಗರಣದ ಆರೋಪ ಎದುರಿಸುತ್ತಿರುವ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು. ಆದರೆ ಲಜ್ಜೆ ಬಿಟ್ಟು ನಡೆದುಕೊಳ್ಳುತ್ತಿದ್ದಾರೆ. ಪ್ರಕರಣವನ್ನು ಅವಲೋಕಿಸಿದಾಗ ಸಿಎಂ ಸ್ವಜನಪಕ್ಷಪಾತ, ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಬೇಕು.
-ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್‌ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.