Team India ಬೌಲಿಂಗ್ ಕೋಚ್ ಆಗಿ ವಿದೇಶಿ ಆಟಗಾರ? ಈ ಬೌಲರ್ ಹೆಸರು ಸೂಚಿಸಿದ ಗೌತಿ


Team Udayavani, Jul 12, 2024, 1:34 PM IST

Foreign player as Team India bowling coach? Gautam Gambhir suggested a name to BCCI

ಮುಂಬೈ: ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರನಾಗಿ (Head Coach) ಗೌತಮ್ ಗಂಭೀರ್ (Gautam Gambhir) ಅವರು ಇತ್ತೀಚೆಗೆ ನೇಮಕವಾಗಿದ್ದಾರೆ. ಇದೀಗ ಗೌತಮ್ ಅವರ ಸಹಾಯಕರ ನೇಮಕಕ್ಕೆ ಬಿಸಿಸಿಐ (BCCI) ಮುಂದಾಗಿದೆ. ಇದಕ್ಕೆ ಇದೀಗ ಹಲವು ಹೆಸರುಗಳು ಕೇಳಿಬರುತ್ತಿದೆ.

ಹೊಸ ಕೋಚ್ ಗೆ ಸಹಾಯಕರಾಗಿ ಬ್ಯಾಟಿಂಗ್ ಕೋಚ್, ಫೀಲ್ಡಿಂಗ್ ಕೋಚ್ ಮತ್ತು ಬೌಲಿಂಗ್ ಕೋಚ್ ನೇಮಕವಾಗಬೇಕಿದೆ. ಮುಖ್ಯ ಕೋಚ್ ಸೂಚಿಸಿದ ಹೆಸರುಗಳನ್ನು ಅಳೆದು ತೂಗಿ ಬಿಸಿಸಿಐ ಈ ಕೋಚ್ ಗಳನ್ನು ನೇಮಿಸುತ್ತದೆ.

ಬೌಲಿಂಗ್ ಕೋಚ್ ಹುದ್ದೆಗೆ ಇದೀಗ ಹಲವು ಹೆಸರುಗಳು ಕೇಳಿಬರುತ್ತಿದೆ. ಆರಂಭದಲ್ಲಿ ಕನ್ನಡಿಗ ವಿನಯ್ ಕುಮಾರ್ ಅವರ ಹೆಸರನ್ನು ಗೌತಿ ಸೂಚಿಸಿದ್ದರು ಎನ್ನಲಾಗಿತ್ತು. ಆದರೆ ಬಿಸಿಸಿಐ ಇದನ್ನು ನಿರಾಕರಿಸಿದೆ ಎಂದು ವರದಿಯಾಗಿದೆ. ಆ ಬಳಿಕ ಮಾಜಿ ವೇಗಿಗಳಾದ ಜಹೀರ್ ಖಾನ್ ಮತ್ತು ಲಕ್ಷ್ಮೀಪತಿ ಬಾಲಾಜಿ ಅವರ ಹೆಸರುಗಳು ಕೇಳಿಬಂದಿದ್ದವು.

ಆದರೆ ಇದೀಗ ಹೊಸ ಹೆಸರೊಂದು ತೇಲಿ ಬಂದಿದೆ. ಈ ಹಿಂದೆ ಎಲ್ಎಸ್ ಜಿಯಲ್ಲಿ ತನ್ನೊಂದಿಗೆ ಕೆಲಸ ಮಾಡಿದ್ದ ದಕ್ಷಿಣ ಆಫ್ರಿಕಾದ ಮಾಜಿ ಬೌಲರ್ ಮೋರ್ನೆ ಮೊರ್ಕೆಲ್ (Morne Morkel) ಅವರನ್ನು ಗೌತಮ್ ಗಂಭೀರ್ ಶಿಫಾರಸ್ಸು ಮಾಡಿದ್ದಾರೆ ಎನ್ನುತ್ತಿದೆ ವರದಿ.

ಮೊರ್ಕೆಲ್ ಅವರು ಕಳೆದ ವರ್ಷ ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ ನಲ್ಲಿ ಪಾಕಿಸ್ತಾನ ತಂಡದ ತರಬೇತುದಾರರಾಗಿದ್ದರು. ಆದರೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಯೊಂದಿಗಿನ ಒಪ್ಪಂದದ ಅವಧಿ ಮುಗಿಯುವ ಮೊದಲೇ ಅಲ್ಲಿ ಕೆಲಸ ತೊರೆದರು.

ಮೊರ್ಕೆಲ್ ಅವರು ದಕ್ಷಿಣ ಆಫ್ರಿಕಾ ಪರ 2006ರಿಂದ 2018ರವರೆಗೆ 86 ಟೆಸ್ಟ್, 117 ಏಕದಿನ ಮತ್ತು 44 ಟಿ20 ಪಂದ್ಯಗಳನ್ನಾಡಿದ್ದಾರೆ. ಗೌತಿ ಮೊರ್ಕೆಲ್ ಅವರ ಹೆಸರನ್ನು ಸೂಚಿಸಿದ್ದು, ಸದ್ಯ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ವೇಗಿಯ ಜೊತೆ ಮಾತುಕತೆ ನಡೆದಿದೆ ಎಂದು ಕ್ರಿಕ್ ಬಜ್ ವರದಿ ಮಾಡಿದೆ.

ಅಂತಾರಾಷ್ಟ್ರೀಯ ಮತ್ತು ಐಪಿಎಲ್ ಮಟ್ಟದಲ್ಲಿ ಪರಿಣಾಮಕಾರಿ ಕೋಚ್ ಎಂಬ ಹೆಗ್ಗಳಿಕೆಯ ಮೊರ್ಕೆಲ್ ಅವರು ಗಂಭೀರ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಎಲ್ಎಸ್ ಜಿ ತಂಡದಲ್ಲಿ ಅವರು ಎರಡು ವರ್ಷ ಕೆಲಸ ಮಾಡಿದ್ದಾರೆ. ಹೀಗಾಗಿ ಗಂಭೀರ್ ಅವರು ಮೊರ್ಕೆಲ್ ಆಯ್ಕೆ ವಿಚಾರದಲ್ಲಿ ಉತ್ಸುಕರಾಗಿದ್ದಾರೆ ಎನ್ನುತ್ತಿದೆ ವರದಿ.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tennis

US Open;ಅಮೆರಿಕದ ಟೇಲರ್‌ ಫ್ರಿಟ್ಜ್ ಗೆ ಸೋಲು:ಸಿನ್ನರ್‌ ಯುಎಸ್‌ ಚಾಂಪಿಯನ್‌

1-slk

3rd Test: ಶ್ರೀಲಂಕಾಕ್ಕೆ 8 ವಿಕೆಟ್‌ ಜಯ: ಇಂಗ್ಲೆಂಡಿಗೆ 2-1 ಟೆಸ್ಟ್‌  ಸರಣಿ

Foot ball

Football; ಭಾರತಕ್ಕೆ ಸೋಲು: ಸಿರಿಯಾಕ್ಕೆ ಪ್ರಶಸ್ತಿ

Pak 2

Pakistan ಆ್ಯತ್ಲೀಟ್‌ಗಳಿಗೆ ಭಾರತೀಯ ರಾಯಭಾರ ಕಚೇರಿಯಿಂದ ವೀಸಾ

1-reee

New Zealand-Afghanistan ಏಕೈಕ ಟೆಸ್ಟ್‌ : ಹೊರ ಮೈದಾನ ಒದ್ದೆ; ನಡೆಯದ ಆಟ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.