Ambani; ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

ಎಲ್ಲವೂ ಸಂಪೂರ್ಣವಾಗಿ ಭಾರತೀಯ ಮೌಲ್ಯಗಳಿಂದ ಕೂಡಿರಲಿವೆ...

Team Udayavani, Jul 12, 2024, 8:03 PM IST

1-aare

ಮುಂಬೈ: ಅನಂತ್ ಅಂಬಾನಿ- ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವು ಶುಕ್ರವಾರ (ಜುಲೈ 12) ಮುಂಬೈನ ಬಾಂದ್ರಾ ಕುರ್ಲಾದಲ್ಲಿರುವ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ‘ಭಾರತೀಯ ಥೀಮ್’ನಲ್ಲಿ ನಡೆಸಲು ಎಲ್ಲ ರೀತಿಯಲ್ಲೂ ವಿವಾಹಕ್ಕೆ ಸಿದ್ಧವಾಗಿದೆ. ಭಾರತ ಮತ್ತು ವಿದೇಶಗಳ ಅತಿಥಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವುದಕ್ಕಾಗಿ ಇಡೀ ವೇದಿಕೆಯನ್ನು ಭಾರತೀಯ ಬಣ್ಣಗಳಲ್ಲಿ ಚಿತ್ರಿಸಲಾಗಿದೆ. ಅತಿಥಿಗಳ ಡ್ರೆಸ್ ಕೋಡ್ ಆಗಿರಲಿ, ಅಲಂಕಾರಕ್ಕಾಗಿ ಕೆತ್ತಿರುವ ಹೂವುಗಳು ಮತ್ತು ಎಲೆಗಳು, ಸಂಗೀತ ಅಥವಾ ವಿವಿಧ ಭಕ್ಷ್ಯಗಳು ಹೀಗೆ ಎಲ್ಲವೂ ಸಂಪೂರ್ಣವಾಗಿ ಭಾರತೀಯ ಮೌಲ್ಯಗಳಿಂದ ಕೂಡಿರಲಿವೆ.

ಮದುವೆ ಸಮಾರಂಭದ ಸ್ಥಳದಲ್ಲಿ ಕಾಶಿಯ ಅಂದರೆ ಬನಾರಸ್‌ನ ಘಾಟ್‌ಗಳನ್ನು ನಿಖರವಾಗಿ ಮರುಸೃಷ್ಟಿಸಲಾಗಿದೆ. ಈ ಘಾಟ್‌ಗಳಲ್ಲಿ ಅತಿಥಿಗಳು ನಗರದ ಚಾಟ್, ಕಚೋರಿ ಮತ್ತು ಪಾನ್ ಅನ್ನು ಆನಂದಿಸಲು ಸಾಧ್ಯವಾಗುತ್ತದೆ. ಬಾಬಾ ವಿಶ್ವನಾಥ ದೇವಸ್ಥಾನದ ಪ್ರತಿಕೃತಿ ಮತ್ತು ಬನಾರಸ್‌ನ ಶ್ರೀಮಂತ ಮತ್ತು ಪುರಾತನ ಸಂಪ್ರದಾಯಗಳ ಮಧ್ಯೆ ಈ ವಿವಾಹದ ವಿಧಿವಿಧಾನಗಳು ನೆರವೇರಲಿವೆ. ರುಚಿಯ ಜೊತೆಗೆ ಸಂಗೀತದ ಜುಗಲ್ಬಂಧಿಯೂ ಇರುತ್ತದೆ. ಕಾಶಿಯ ಸ್ಥಳೀಯ ಕಲಾವಿದರು ಮತ್ತು ಸಂಗೀತಗಾರರು ಅತಿಥಿಗಳಿಗೆ ಸಂಗೀತದ ರಸದೌತಣವನ್ನು ಉಣಬಡಿಸಲಿದ್ದಾರೆ. ಅನಂತ್ ಅವರ ತಾಯಿ ನೀತಾ ಅಂಬಾನಿ ಬನಾರಸ್ ಮತ್ತು ಬನಾರಸಿ ನೇಕಾರರೊಂದಿಗೆ ಹಳೆಯ ಪರಿಚಯ ಹಾಗೂ ಬಾಂಧವ್ಯವನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ನೀತಾ ಅಂಬಾನಿ ಕಾಶಿ-ವಿಶ್ವನಾಥ ದೇವರ ಪಾದದಡಿಯಲ್ಲಿ ಮದುವೆಯ ಆಮಂತ್ರಣವನ್ನು ಇಟ್ಟು, ಆಹ್ವಾನವನ್ನು ನೀಡಿದ್ದರು.

ಅನಂತ್-ರಾಧಿಕಾ ವಿವಾಹದಲ್ಲಿ ಹಿಂದೂಸ್ತಾನಿ ಸಂಗೀತದ ಅತಿರಥ- ಮಹಾರಥರು ಭಾರತದ ಶ್ರೀಮಂತ ಸಂಗೀತ ಸಂಪ್ರದಾಯಗಳನ್ನು ಜಗತ್ತಿಗೆ ಪರಿಚಯಿಸಲಿದ್ದಾರೆ. ಸಿತಾರ್, ಷಹನಾಯಿ, ಸರೋದ್, ರಾಜಸ್ಥಾನಿ ಜನಪದ ಸಂಗೀತ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಗಜಲ್ ಅನ್ನು ಸಹ ಅತಿಥಿಗಳು ಆನಂದಿಸುತ್ತಾರೆ. ಈ ಕೂಟದಲ್ಲಿ “ಭಜನ್ ನಿಂದ ಬಾಲಿವುಡ್”ವರೆಗಿನ ಸಂಗೀತವು ಆವರಿಸಿರುತ್ತದೆ. ಭಾರತದ ಖ್ಯಾತ ಸಂಗೀತ ಸಂಯೋಜಕರು ಮತ್ತು ಗಾಯಕರಾದ ಶಂಕರ್ ಮಹಾದೇವನ್, ಹರಿಹರನ್, ಸೋನು ನಿಗಮ್, ಶ್ರೇಯಾ ಘೋಷಾಲ್ ಮತ್ತು ಕೌಶಿಕಿ ಚಕ್ರವರ್ತಿ, ಅಮಿತ್ ತ್ರಿವೇದಿ, ನೀತಿ ಮೋಹನ್ ಮತ್ತು ಪ್ರೀತಮ್ ಕಾರ್ಯಕ್ರಮ ನೀಡಲಿದ್ದಾರೆ. ಜನಪದ ಗಾಯಕರಾದ ಮಾಮೆ ಖಾನ್ ಮತ್ತು ಗಜಲ್ ಕಲಾವಿದೆ ಕವಿತಾ ಸೇಠ್ ಕೂಡ ತಮ್ಮ ಗಾಯನದಿಂದ ಪ್ರೇಕ್ಷಕರನ್ನು ಪುಳಕಗೊಳಿಸಲಿದ್ದಾರೆ. ಅನಿಲ್ ಭಟ್, ಸುಮೀತ್ ಭಟ್ ಮತ್ತು ವಿವೇಕ್ ಭಟ್ ಸಂಗೀತಕ್ಕೆ ಪಂಜಾಬಿಯ ಸಂಭ್ರಮವನ್ನು ಸಹ ಸೇರಿಸುತ್ತಾರೆ.

ಅಂಬಾನಿ ಕುಟುಂಬಕ್ಕೆ ಹಿಂದೂ ಪದ್ಧತಿ ಮತ್ತು ಸನಾತನ ಧರ್ಮದಲ್ಲಿ ಅಪಾರ ನಂಬಿಕೆ ಇದೆ. ಈ ಕಾರಣಕ್ಕಾಗಿ ಕಾಶಿಯ ಥೀಮ್ ಆಯ್ಕೆ ಮಾಡಲಾಗಿದೆ. ಮದುವೆ ಸಮಾರಂಭದಲ್ಲಿ ವಿಷ್ಣುವಿನ ದಶಾವತಾರವನ್ನೂ ಪ್ರದರ್ಶಿಸಲಾಗಿದೆ. ವಿಷ್ಣುವಿನ ಹತ್ತು ಅವತಾರಗಳನ್ನು ಆಡಿಯೋ ದೃಶ್ಯದ ಮೂಲಕ ವಿವರಿಸಲಾಗಿದೆ. ಮದುವೆಯ ನಂತರವೂ ಈ ಪ್ರದರ್ಶನ ಮುಂದುವರಿಯುತ್ತದೆ.

ಟಾಪ್ ನ್ಯೂಸ್

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

ಇಂದು ದಿಲ್ಲಿಗೆ ಹೊಸ ಸಿಎಂ? ಸಂಜೆ ಸಿಎಂ ಕೇಜ್ರಿವಾಲ್‌ ರಾಜೀನಾಮೆ

modi (4)

MODI ಇಂದು 75ನೇ ವಸಂತಕ್ಕೆ ಕಾಲಿಟ್ಟ ಮೋದಿ: ಎಲ್ಲೆಡೆ ಹುಟ್ಟುಹಬ್ಬ ಆಚರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.