Congress ಸರಕಾರದ ವಿರುದ್ಧ ಸದನದಲ್ಲಿ ಜಂಟಿ ಹೋರಾಟ: ನಿರ್ಧಾರ
Team Udayavani, Jul 13, 2024, 12:00 AM IST
ಬೆಂಗಳೂರು: ಭ್ರಷ್ಟಾಚಾರದಲ್ಲಿ ಸಿಲುಕಿರುವ ರಾಜ್ಯ ಸರಕಾರದ ವಿರುದ್ಧ ವಿಧಾನಮಂಡಲದ ಉಭಯ ಸದನಗಳಲ್ಲಿ ಇದೇ ಮೊದಲ ಬಾರಿಗೆ ಎನ್‌ಡಿಎ ಒಕ್ಕೂಟ ಹೋರಾಟ ನಡೆಸಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಬೆಂಗಳೂರಿನಲ್ಲಿ ನಡೆದ ಜಂಟಿ ಸಮನ್ವಯ ಸಮಿತಿ ಸಭೆಯ ಬಳಿಕ ಅವರು ಮಾತನಾಡಿ, ಎರಡು ಸದನದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ನಡೆಸುತ್ತದೆ. ಎಲ್ಲ ವಿಚಾರವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ನಿರ್ಧರಿಸಲಾಗಿದೆ. ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಸಿಲುಕಿರುವ ಸರಕಾರಕ್ಕೆ ಜನರು ಛೀ-ಥೂ ಎಂದು ಉಗಿಯುತ್ತಿದ್ದಾರೆ ಎಂದು ಟೀಕಿಸಿದರು.
ಇಂದಿನ ಸಭೆಯಲ್ಲಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ ಸೇರಿ ಹಿರಿಯ ನಾಯಕರು ಭಾಗವಹಿಸಿದ್ದರು. ಹೋರಾಟ ಸಂದರ್ಭದಲ್ಲಿ ನಡೆದ ತಳ್ಳಾಟ-ನೂಕಾಟದಿಂದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಜ್ವರ ಬಂದಿದೆ. ಹೀಗಾಗಿ ಅವರು ಸಭೆಗೆ ಬಂದಿರಲಿಲ್ಲ. ನಾನು ಅವರ ಜತೆ ದೂರವಾಣಿಯಲ್ಲಿ ಚರ್ಚೆ ನಡೆಸುತ್ತೇನೆ. ಅಧಿವೇಶನದಲ್ಲಿ ಈ ಸರಕಾರವನ್ನು ಬಟಾಬಯಲು ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರು ನಮ್ಮ ವಿರುದ್ಧ 40 ಪರ್ಸೆಂಟ್ ಆರೋಪ ಮಾಡಿದ್ದರು. ಆದರೆ ಇವರು ದಲಿತರ ಹಣವನ್ನು 100 ಪರ್ಸೆಂಟ್ ಲೂಟಿ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಖುದ್ದು ಸಿದ್ದರಾಮಯ್ಯನವರೇ ಸಿಲುಕಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.