Valmiki scam: ಶಾಸಕರು ಭಾಗಿಯಾಗಿದ್ದರೆ ಕಳಂಕ: ಸತೀಶ ಜಾರಕಿಹೊಳಿ
Team Udayavani, Jul 13, 2024, 12:06 AM IST
ಬೆಳಗಾವಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಂತ್ರಿಗಳು ಮತ್ತು ಶಾಸಕರು ಭಾಗಿಯಾಗಿದ್ದರೆ ಅದು ಖಂಡಿತ ಕಳಂಕ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಪ್ರಕರಣ ಸದ್ಯ ತನಿಖಾ ಹಂತದಲ್ಲಿದೆ. ಸಂಪೂರ್ಣ ತನಿಖೆ ನಡೆದ ಅನಂತರ ಎಲ್ಲ ಸತ್ಯ ಗೊತ್ತಾಗಲಿದೆ. ಆದರೆ ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿಯೂ ಅದೊಂದು ಕಳಂಕ ಎಂದರು.
187 ಕೋಟಿ ರೂ. ಹಣ ವರ್ಗಾವಣೆಯ ದಾಖಲೆ ನೋಡಿದ ಮೇಲೆಯೇ ಈ ಪ್ರಕರಣ ಗೊತ್ತಾಗಲಿದೆ. ಹೀಗಾಗಿ ತತ್ಕ್ಷಣ ಈ ಪ್ರಕರಣ ಹೀಗೆ ಇದೆ ಎಂದು ಹೇಳುವುದು ಕಷ್ಟ ಎಂದು ಅಭಿಪ್ರಾಯಪಟ್ಟರು.ಬಿಜೆಪಿಯವರು ಮುಡಾ ಹಗರಣವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ಇದರಲ್ಲಿ ಮುಖ್ಯಮಂತ್ರಿಗಳ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.