State Govt ಸಹಾಯಕ ಪ್ರಾಧ್ಯಾಪಕರ ಶೀಘ್ರ ನೇಮಕಾತಿಗೆ ಸುರೇಶ್ ಪತ್ರ
Team Udayavani, Jul 13, 2024, 12:09 AM IST
ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಮೂರು ವರ್ಷವಾಗಿದೆ. ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ನೇಮಕಾತಿ ಪತ್ರ ಕೊಡದೆ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರಕಾರದ ಕ್ರಮವನ್ನು ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಂಡಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ.ಸುಧಾಕರ್ ಅವರಿಗೆ ಪತ್ರ ಬರೆದಿರುವ ಸುರೇಶ್ ಕುಮಾರ್, ನೇಮಕಾತಿಗೆ ಆಧಿಸೂಚನೆ ಆದಂದಿನಿಂದಲೂ ಕೋರ್ಟ್ ಕೇಸ್, ಚುನಾವಣ ನೀತಿ ಸಂಹಿತೆ, ವರ್ಗಾವಣೆ ಕಾಯ್ದೆ ತಿದ್ದುಪಡಿ ಹೀಗೆ ಕಾರಣಗಳನ್ನು ಹೇಳುತ್ತ ಅರ್ಹ ಅಭ್ಯರ್ಥಿಗಳು ಇನ್ನೆಷ್ಟು ದಿನ ಕೆಲಸವಿಲ್ಲದೆ ಕಾಯಬೇಕು. ನೇಮಕಾತಿ ಅಧಿಸೂಚನೆ ಹೊರಟು ಮೂರು ವರ್ಷಗಳೇ ಆಗಿವೆ. ಇಷ್ಟೋತ್ತಿಗೆ ಮಕ್ಕಳಿಗೆ ಪಾಠ ಮಾಡಬೇಕಿದ್ದ ಪ್ರಾಧ್ಯಾಪಕರು ಸ್ವಾತಂತ್ರ್ಯ ವನದಲ್ಲಿ ಸತ್ಯಾಗ್ರಹ ಮಾಡುತ್ತ ಕೂರುವ ಪರಿಸ್ಥಿತಿ ಬಂದಿದೆ ಎಂದು ದೂರಿದ್ದಾರೆ.
ನಿರುದ್ಯೋಗಿಗಳಿಗೆ ಉದ್ಯೋಗ ಭತ್ಯೆ ಕೊಡುತ್ತೇವೆ ಎಂದು ಹೇಳಿದ್ದ ಸರಕಾರ ಕೆಲಸ ಕೊಟ್ಟು ಬದ್ಧತೆ ತೋರಬೇಕು, ಅಭ್ಯರ್ಥಿಗಳಿಗೆ ಉದ್ಯೋಗ ಕೊಡುವುದು ನ್ಯಾಯಯುತ ಕ್ರಮವಾಗಿದ್ದು ಈ ದಿಕ್ಕಿನಲ್ಲಿ ಸರಕಾರ ಕಾರ್ಯಪ್ರವೃತ್ತಗೊಳ್ಳಬೇಕು. ಯುವಕ ಯುವತಿಯರ ಶೋಕಗಾಥೆಯನ್ನು ಆಲಿಸಿ ಸರಕಾರ ಅವರಿಗೆ ಸ್ಪಂದಿಸಬೇಕು ಎಂದು ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.