Mangaluru University ಕುಂದ ಕನ್ನಡ ಭಾಷಾ ಅಧ್ಯಯನ ಪೀಠಕ್ಕೆ 50 ಲಕ್ಷ ರೂ. ಅನುದಾನ
Team Udayavani, Jul 13, 2024, 12:26 AM IST
ಬೆಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುಂದಾ ಕನ್ನಡ ಭಾಷಾ ಅಧ್ಯಯನ ಪೀಠ ಸ್ಥಾಪನೆಗೆ ಸಂಬಂಧಿಸಿ ವಿವಿಧ ಷರತ್ತುಗಳನ್ನು ವಿಧಿಸಿ 50 ಲಕ್ಷ ರೂ. ಅನುದಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಡಿ ಬರುವ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ಇರಬೇಕಾದ ಪೀಠಗಳ ಸಂಖ್ಯೆಯನ್ನು ನಿರ್ಧರಿಸುವ ಸಂಬಂಧ ಕಾರ್ಯನೀತಿಯನ್ನು ರೂಪಿಸುವಂತೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ತಿಳಿಸಲಾಗಿದೆ.
ಈ ಪೀಠ ಸ್ಥಾಪನೆ ಬಗ್ಗೆ ಸಂಸ್ಥೆಯು ನೀಡುವ ವರದಿ ಅನುಷ್ಠಾನಗೊಳಿಸುವ, ಅನುದಾನ ಬಳಕೆ ಮಾಡಲು ಸಾಧ್ಯವಾಗದಿದ್ದಲ್ಲಿ ನಿಯಮಾನುಸಾರ ಸರಕಾರಕ್ಕೆ ಹಿಂದಿರುಗಿಸುವುದು ಸೇರಿದಂತೆ ಒಟ್ಟು 9 ಷರತ್ತುಗಳನ್ನು ವಿಧಿಸಿ 50ಲಕ್ಷ ರೂ. ಮಂಜೂರು ಮಾಡಿದೆ.
ಉಡುಪಿ ಜಿಲ್ಲಾ ವ್ಯಾಪ್ತಿಯ ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲೂಕುಗಳಲ್ಲಿ ಪೂರ್ಣವಾಗಿ, ಹೆಬ್ರಿ, ಕಾಪು ಉಡುಪಿಯೂ ಸೇರಿದಂತೆ ಕೆಲವು ಭಾಗಗಳಲ್ಲಿ ಮಾತೃ ಭಾಷೆಯಾಗಿ ಕುಂದ ಕನ್ನಡ ಬಳಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಭಾಷಾ ಅಧ್ಯಯನ ಪೀಠದ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾರ್ಯಚಟುವಟಿಕೆಗಳನ್ನು ವಿಸ್ತರಣೆ ಮಾಡಲು ಅಗತ್ಯವಿರುವ ಅನುದಾನ ನೀಡುವಂತೆ ಮಂಗಳೂರು ವಿಶ್ವವಿದ್ಯಾನಿಲಯ ಈ ಹಿಂದೆ ಸರಕಾರಕ್ಕೆ ಪತ್ರ ಬರೆದಿದ್ದು, ಈ ವಿಚಾರ ಸರಕಾರದ ಮಟ್ಟದಲ್ಲಿ ಬಾಕಿ ಉಳಿದಿತ್ತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.