Congress ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣರ ಮನಗೆಲ್ಲಿ: ಕಾರ್ಯಕರ್ತರ ಆಗ್ರಹ

Team Udayavani, Jul 13, 2024, 6:20 AM IST

Congress ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣರ ಮನಗೆಲ್ಲಿ: ಕಾರ್ಯಕರ್ತರ ಆಗ್ರಹ

ಬೆಂಗಳೂರು: ರಾಜ್ಯದ ಪ್ರಬಲ ಸಮುದಾಯಗಳಾದ ವೀರಶೈವ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರು ಕಾಂಗ್ರೆಸ್‌ ಪಕ್ಷದಿಂದ ದೂರ ಉಳಿದಿದ್ದು, ಈ ವರ್ಗವನ್ನು ವಾಪಸ್‌ ಕರೆತರುವ ಪ್ರಯತ್ನಗಳು ಆದ್ಯತೆ ಮೇರೆಗೆ ನಡೆಯಬೇಕು. ಇದಕ್ಕೆ ಸ್ವತಃ ಹೈಕಮಾಂಡ್‌ ತಂತ್ರಗಾರಿಕೆ ರೂಪಿಸುವ ಅಗತ್ಯ ಇದೆ ಎಂದು ಕಾಂಗ್ರೆಸ್‌ನ ಕೆಲವು ಪದಾಧಿಕಾರಿಗಳು ಸತ್ಯಶೋಧನ ಸಮಿತಿಗೆ ವರದಿ ಸಲ್ಲಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಈ ಮೂರೂ ಸಮುದಾಯಗಳು ಬೆಂಬಲ ನೀಡಿದ್ದರಿಂದ ಕಾಂಗ್ರೆಸ್‌ ನಿರೀಕ್ಷಿತ ಗೆಲುವು ಸಾಧಿಸಲು ಸಾಧ್ಯವಾಯಿತು. ಆದರೆ ಒಂದು ವರ್ಷದ ಅಂತರದಲ್ಲಿ ಚಿತ್ರಣ ಬದಲಾಯಿತು. ಪ್ರಬಲ ಸಮುದಾಯಗಳು ಪಕ್ಷದಿಂದ ಅಂತರ ಕಾಯ್ದುಕೊಂಡ ಪರಿಣಾಮ ಹಿನ್ನಡೆ ಉಂಟಾಯಿತು. ಈ ಹಿನ್ನೆಲೆಯಲ್ಲಿ ಅವರನ್ನು ವಾಪಸ್‌ ಕರೆತರುವ ಕೆಲಸ ಆಗಬೇಕು ಎಂಬ ಆಗ್ರಹ ಕೇಳಿಬಂದಿದೆ. ಬಿಜೆಪಿ-ಜೆಡಿಎಸ್‌ ಮೈತ್ರಿಯು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಿನ್ನಡೆಗೆ ಕಾರಣವಾಗಿರಬಹುದು.

ಇದರ ಜತೆಗೆ ಸಮುದಾಯಗಳು ಅಂತರ ಕಾಯ್ದುಕೊಳ್ಳಲು ಯಾವ್ಯಾವ ಅಂಶಗಳು ಕಾರಣವಾಗಿವೆ ಎಂಬುದನ್ನು ತಿಳಿಯಲು ಖಾಸಗಿ ಏಜೆನ್ಸಿ ಮೂಲಕ ಅಥವಾ ಇನ್ನಾವುದಾದರೂ ಮೂಲದಿಂದ ಅಧ್ಯಯನ ನಡೆಸಬೇಕು. ಅದನ್ನು ಆಧರಿಸಿ, ವಾಪಸ್‌ ಕರೆತರಲು ತಂತ್ರಗಾರಿಕೆ ರೂಪಿಸಬೇಕು.

ವರ್ಷದ ಅಂತರದಲ್ಲಿ ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಸರಕಾರ ಜಾರಿಗೊಳಿಸಿದೆ. ಬಜೆಟ್‌ನಲ್ಲೇ ಅಗತ್ಯ ಅನುದಾನವನ್ನೂ ನೀಡಲಾಗಿದೆ. ಯೋಜನೆಗಳಲ್ಲಿ ವೀರಶೈವ ಲಿಂಗಾಯತರು, ಒಕ್ಕಲಿಗರು, ಬ್ರಾಹ್ಮಣರ ಸಹಿತ ಎಲ್ಲ ಸಮುದಾಯಗಳ ಫ‌ಲಾನುಭವಿಗಳೂ ಇದ್ದಾರೆ. ಈ ಮಧ್ಯೆ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನೂ ಸರಕಾರ ಸ್ವೀಕರಿಸಿದೆ. ಈ ಅಂಶ ಎಷ್ಟರಮಟ್ಟಿಗೆ ಪ್ರಭಾವ ಬೀರಿದೆ ಎಂಬುದನ್ನು ನೋಡಬೇಕಿದೆ.

ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ ಯಶಸ್ವಿಯಾದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇದು ಫ‌ಲ ನೀಡಲಿದೆ. ಅಷ್ಟೇ ಅಲ್ಲ, ಮುಂದಿನ ವಿಧಾನಸಭಾ ಚುನಾವಣೆಗೂ ಅನುಕೂಲ ಆಗಲಿದೆ ಎಂದು ಪದಾಧಿಕಾರಿಗಳು ಸಮಿತಿಗೆ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.