Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ
Team Udayavani, Jul 13, 2024, 3:12 PM IST
ಮುಧೋಳ: ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ ಹುಟ್ಟಿಸಿದ್ದು ಜನರು ಮನೆಯಿಂದ ಹೊರಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ.
ಕಳೆದ ಹಲವು ದಿನಗಳಿಂದ ಜಮೀನುಗಳಲ್ಲಿ ಪ್ರತ್ಯಕ್ಷವಾಗಿರುವ ಚಿರತೆ ಮೇಯಲು ಬಿಟ್ಟ ಎಮ್ಮೆ, ಕರುಗಾಲ ಮೇಲೆ ದಾಳಿ ನಡೆಸಿದ್ದು ಚಿರತೆ ಕಾಟದಿಂದ ಗ್ರಾಮದ ಜನ ರೋಸಿ ಹೋಗಿದ್ದಾರೆ.
ಯಡಹಳ್ಳಿ ಚಿಂಕಾರ ರಕ್ಷಿತಾರಣ್ಯಕ್ಕೆ ಹೊಂದಿಕೊಂಡಿರುವ ಕಿಶೋರಿ ಗ್ರಾಮದ ಜಮೀನುಗಳಲ್ಲಿ ಓಡಾಡುತ್ತಿರುವ ಚಿರತೆ ನಾಯಿಯೊಂದನ್ನು ಕೊಂದು ತಿಂದಿದ್ದು, ಅರ್ಧ ಕಳೇಬರವನ್ನು ಕಬ್ಬಿನ ಜಮೀನಿನಲ್ಲಿ ಬಿಟ್ಟು ಪರಾರಿಯಾಗಿದೆ. ಚಿರತೆ ಕಾಟದಿಂದ ಕಂಗಾಲಾಗಿರುವ ಕಿಶೋರಿ ಹಾಗೂ ಸುತ್ತಲಿನ ಗ್ರಾಮಸ್ಥರು ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ.
ಚಿರತೆ ಸೆರೆಯಲು ಮುಂದಾಗಿರುವ ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಕಿಶೋರಿ-ಮೆಳ್ಳಿಗೇರಿ ಗ್ರಾಮದ ಸರಹದ್ದಿನಲ್ಲಿ ಶುಕ್ರವಾರದಿಂದ ಕೋಂಬಿಂಗ್ ಆರಂಭಿಸಿದ್ದಾರೆ ಆದರೆ ಇದುವರೆಗೆ ಚಿರತೆ ಮಾತ್ರ ಪತ್ತೆಯಾಗಿಲ್ಲ.
ಇದನ್ನೂ ಓದಿ: Sirsi: ಸರಕಾರದಿಂದ ಸಂಸ್ಕೃತ ಕ್ಷೇತ್ರಕ್ಕೆ ಉತ್ತೇಜನ ಸಿಗಬೇಕು: ಸ್ವರ್ಣವಲ್ಲೀ ಶ್ರೀ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.