Davanagere; ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರ-ಸ್ವಜನಪಕ್ಷಪಾತದಲ್ಲಿ ತೊಡಗಿದೆ: ಕಾರಜೋಳ
Team Udayavani, Jul 13, 2024, 6:32 PM IST
ದಾವಣಗೆರೆ: ಕಾಂಗ್ರೆಸ್ ಸರ್ಕಾರ ಎಂದರೆ ಹಗರಣಗಳ ಸರಮಾಲೆ. ಸ್ವಾತಂತ್ರ್ಯ ನಂತರ ಆಡಳಿತ ಮಾಡಿದ ಕಾಂಗ್ರೆಸ್ ನಲ್ಲಿ ಅನೇಕರು 60 ಲಕ್ಷ ಕೋಟಿಗಿಂತ ಅಧಿಕ ಹಗರಣ ಮಾಡಿ ಜೈಲು ಸೇರಿದ್ದಾರೆ. ಕೆಲವರು ಜಾಮೀನು ಮೇಲೆ ಹೊರಗಿದ್ದಾರೆ ಎಂದು ಮಾಜಿ ಸಚಿವ, ಸಂಸದ ಗೋವಿಂದ ಕಾರಜೋಳ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮತ್ತು ಸ್ವಜನಪಕ್ಷಪಾತದಲ್ಲಿ ತೊಡಗಿದೆ. ಸಾಚಾ ಎಂದು ಹೇಳಿಕೊಳ್ಳುತಿದ್ದವರು ಇಂದು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸರ್ಕಾರದಿಂದ ಬ್ಯಾಂಕ್ ದರೋಡೆಯಾಗಿದ್ದು ಕರ್ನಾಟಕ ಇತಿಹಾಸದಲ್ಲಿ ಈ ಹಿಂದೆ ಎಂದೂ ಆಗಿರಲಿಲ್ಲ. ಬ್ಯಾಂಕ್ ದರೋಡೆಯಲ್ಲಿ ಸರ್ಕಾರದ ಸಚಿವರೇ ಭಾಗಿಯಾಗಿದ್ದು ನಾಚಿಕೆಗೇಡಿನ ಸಂಗತಿ ಎಂದರು.
ರಾಷ್ಟ್ರೀಕೃತ ಬ್ಯಾಂಕ್ ಇರುವುದರಿಂದ ಇಡಿಯವರು ತನಿಖೆ ಮಾಡುತ್ತಿದ್ದಾರೆ. ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತಿರುವವರನ್ನು ಬಂಧನ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಹೇಳಲು ಇಷ್ಟಪಡುತ್ತೇನೆ. ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣದಲ್ಲಿ ತಾವು ಸ್ವಚ್ಛ ಇರುವದನ್ನು ಸಾಬೀತು ಪಡಿಸಬೇಕು ಎಂದು ಆಗ್ರಹಿಸಿದರು.
ಸರಕಾರದ ಖಜಾನೆಯಿಂದ ಹಣ ಬಿಡುಗಡೆಯಾಗಿದೆ. ಆದ್ದರಿಂದ ಸಿದ್ದುಗೆ ಸಮರ್ಥನೆ ಮಾಡಿ ಅವರನ್ನು ಉಳಿಸುವ ನೈತಿಕತೆ ಇಲ್ಲ. ಆದ್ದರಿಂದ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು ಎಂದು ಕಾರಜೋಳ ಅಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.