Congressನಿಂದ ಬೆಳಗಾವಿ ಅಧಿವೇಶನ ಶತಮಾನೋತ್ಸವ ಸಮಿತಿ ರಚನೆ
1924ಕ್ಕೆ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದಿತ್ತು ಕಾಂಗ್ರೆಸ್ ಅಧಿವೇಶನ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಗೌರವಾಧ್ಯಕ್ಷ, ಎಚ್.ಕೆ. ಪಾಟೀಲ್ ಅಧ್ಯಕ್ಷರಾಗಿ ನೇಮಕ
Team Udayavani, Jul 13, 2024, 10:11 PM IST
ಬೆಂಗಳೂರು: ಬೆಳಗಾವಿಯಲ್ಲಿ 1924 ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ “ಕಾಂಗ್ರೆಸ್ ಅಧಿವೇಶನ’ದ ಶತಮಾನೋತ್ಸವ ಸಂಭ್ರಮ ಆಚರಣೆಗಾಗಿ ಕೆಪಿಸಿಸಿಯು “ಬೆಳಗಾವಿ ಅಧಿವೇಶನ ಶತಮಾನೋತ್ಸವ ಸಮಿತಿ’ ರಚಿಸಿದೆ.
ಕರ್ನಾಟಕದಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಕಾಂಗ್ರೆಸ್ ಅಧಿವೇಶನಕ್ಕೆ ಸಾಕ್ಷಿಯಾದ ನೆಲ ಬೆಳಗಾವಿ. ಇದು ಕಾಂಗ್ರೆಸ್ ಇತಿಹಾಸದಲ್ಲಿ ಒಂದು ವಿಶೇಷ ಅಧ್ಯಾಯವಾಗಿದೆ. ಈ ಅಧಿವೇಶನವು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ತರ ಪಾತ್ರವಹಿಸಿತ್ತು. ಈಗ ಈ ಅಧಿವೇಶನಕ್ಕೆ ಶತಮಾನದ ಸಂಭ್ರಮ. ಇದರ ನೆನಪಿಗಾಗಿ ಎಐಸಿಸಿ ಹಾಗೂ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಸಂಭ್ರಮ ಆಚರಣೆಯನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದೆ.
ಈ ಸಮಾರಂಭ ಯಶಸ್ಸಿಗೆ ಕೆಪಿಸಿಸಿಯಿಂದ ಶತಮಾನೋತ್ಸವ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಗೆ ಮಾಜಿ ಸಿಎಂ ಎಂ. ವೀರಪ್ಪ ಮೊಯ್ಲಿ ಗೌರವ ಅಧ್ಯಕ್ಷರಾಗಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಅಧ್ಯಕ್ಷರಾಗಿದ್ದಾರೆ. ವಿಧಾನ ಪರಿಷತ್ತಿನ ಮಾಜಿ ಸಭಾಧ್ಯಕ್ಷ ಡಾ.ಬಿ.ಎಲ್.ಶಂಕರ್ ಅವರನ್ನು ಸಂಚಾಲಕರನ್ನಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಸಮಿತಿಗೆ ಸಚಿವರು, ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮೇಲ್ಮನೆ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಸೇರಿ ಒಟ್ಟು 68 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.