![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 14, 2024, 7:22 AM IST
ಬೆಂಗಳೂರು: ರಾಜ್ಯದಲ್ಲಿ ಶನಿವಾರ 424 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದ್ದು ಆ ಮೂಲಕ ಸೋಂಕಿತ ಸಂಖ್ಯೆ 9,082ಕ್ಕೆ ತಲುಪಿದೆ. ಈ ಮಧ್ಯೆ ಶಂಕಿತ ಡೆಂಗ್ಯೂಗೆ ಮತ್ತಿಬ್ಬರು ಬಲಿಯಾಗಿದ್ದಾರೆ.
ಬಿಬಿಎಂಪಿ ಸೇರಿದಂತೆ 22 ಜಿಲ್ಲೆಗಳಲ್ಲಿ ಗುರುವಾರ 2,557 ಶಂಕಿತ ವ್ಯಕ್ತಿಗಳ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 424 ಮಂದಿಯಲ್ಲಿ ಸೋಂಕು ದೃಢವಾಗಿದೆ. ಪರೀಕ್ಷೆಗೆ ಒಳಪಡಿಸಲಾದ ಶಂಕಿತ ವ್ಯಕ್ತಿಗಳ ಮಾದರಿ ಸಂಖ್ಯೆ 66 ಸಾವಿರಕ್ಕೆ ಏರಿಕೆಯಾಗಿದೆ. ಬಿಬಿಎಂಪಿ 202, ಧಾರವಾಡ, ಮಂಡ್ಯ, ಹಾಸನ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 20 ಪ್ರಕರಣ, ಚಿತ್ರದುರ್ಗ ಕೋಲಾರ ಜಿಲ್ಲೆಯಲ್ಲಿ ತಲಾ 17, ಶಿವಮೊಗ್ಗದಲ್ಲಿ 16 ಪ್ರಕರಣಗಳು ದಾಖಲಾಗಿದೆ.
ಹುಬ್ಬಳ್ಳಿಯ ಕಾಲೇಜಿನಲ್ಲಿ ಓದುತ್ತಿದ್ದ ಉಡುಪಿ ಮೂಲದ 17 ವರ್ಷದ ವಿದ್ಯಾರ್ಥಿನಿ ತೀವ್ರ ಜ್ವರದಿಂದ ಬಳಲುತ್ತಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಕ್ಕೂ ಮುನ್ನ ಜ್ವರ ಬಂದಾಗ ಒಂದು ವಾರ ಸ್ವಯಂ ಔಷಧ ಪಡೆದುಕೊಂಡಿದ್ದಳು ಎನ್ನಲಾಗಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಅವರು ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಸಂಗ್ರಹಿಸಿದ್ದು, ವಿದ್ಯಾರ್ಥಿನಿಗೆ ಎನ್‌ಎಸ್-1 ಕಾರ್ಡ್ ವಿಧಾನದ ಪರೀಕ್ಷೆಯಲ್ಲಿ ಡೆಂಗ್ಯೂ ಪಾಸಿಟಿವ್ ಬಂದಿದೆ ಎಂದು ಹೇಳಲಾಗಿದೆ. ಎಲಿಸಾ ಮತ್ತು ಐಜಿಎಂ ಪರೀಕ್ಷೆಯಲ್ಲಿ ಡೆಂಗ್ಯೂ ದೃಢಪಡಬೇಕಾಗಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳಿಂದ ಶಂಕಿತ ಡೆಂಗ್ಯೂ ಜ್ವರಕ್ಕೆ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳದ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.