MUDA Scam: ಸರ್ಕಾರದ ತನಿಖೆಯಿಂದ ನ್ಯಾಯ ಸಿಗಲ್ಲ: ಎಚ್.ಡಿ.ಕುಮಾರಸ್ವಾಮಿ
ಸತ್ತವರ ಹೆಸರಲ್ಲಿ ಡಿನೋಟಿಫಿಕೇಷನ್: ಸಿಎಂ ವಿರುದ್ಧ ಎಚ್‌ಡಿಕೆ ಗುಡುಗು
Team Udayavani, Jul 14, 2024, 7:30 AM IST
ಬೆಂಗಳೂರು: ಮೈಸೂರಿನ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರದ ತನಿಖೆಯಿಂದ ನ್ಯಾಯ ಸಿಗುವ ಸಾಧ್ಯತೆಗಳಿಲ್ಲ. ಇಲ್ಲಿ ಸತ್ತವರ ಹೆಸರಲ್ಲಿ ಡಿನೋಟಿಫಿಕೇಷನ್ ಆಗಿದೆ. ಆದ್ದರಿಂದ ರಾಜ್ಯಪಾಲರ ಅನುಮತಿ ಪಡೆದು ಹೈಕೋರ್ಟ್‌ನಲ್ಲಿ ದೂರು ಸಲ್ಲಿಸುವ ಮೂಲಕ ಪ್ರಜ್ಞಾವಂತರು ಹೋರಾಟ ಮಾಡಬೇಕು ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷದ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ ಸೇರಿದ ಸ್ವತ್ತು. ಡಿನೋಟಿಫಿಕೇಷನ್ ಬಳಿಕ ನಾಲ್ಕು ವರ್ಷ ಏನೂ ಬೆಳವಣಿಗೆಯೇ ಆಗಿಲ್ಲ. ಸತ್ತವರ ಹೆಸರಿನಲ್ಲಿ ಜಮೀನು ಡಿ ನೋಟಿಫಿಕೇಷನ್ ಆಗಿದೆ ಎಂದು ಆರೋಪಿಸಿದ ಅವರು ಕೆಲ ದಾಖಲೆಗಳನ್ನು ಪ್ರದರ್ಶಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಮೈದ ಖರೀದಿ ಮಾಡಿರುವ ಮೈಸೂರಿನ ಕೆಸರೆ ಬಳಿಯ ಜಮೀನಿಗೆ ಮುಡಾ ಭೂಸ್ವಾಧೀನ ಮಾಡಿ ಪರಿಹಾರ ನೀಡಲಾಗಿದೆ. ಹೀಗಿರುವಾಗ ಇದು ಖಂಡಿತವಾಗಿಯೂ ಮುಡಾಗೆ ಸೇರಿದ ಜಮೀನು ಆಗುತ್ತದೆ. ಈ ಜಮೀನನ್ನು ಡಿ ನೋಟಿಫಿಕೇಷನ್ ಮಾಡಿ ಖರೀದಿಸಲಾಗಿದೆ. ಇದು ಕಾನೂನುಬಾಹಿರ ಎಂದು ಕೇಂದ್ರ ಸಚಿವರು ದೂರಿದರು.
ಸರಕಾರದಿಂದಲೇ ಚಂದ್ರಶೇಖರ್ ಜೀವಹರಣ: ಕುಮಾರಸ್ವಾಮಿ
ವಾಲ್ಮೀಕಿ ನಿಗಮಕ್ಕೆ ಸಂಬಂಧಪಟ್ಟಂತೆ ಭಾರೀ ಅವ್ಯವಹಾರ ಆಗಿದೆ. ಚುನಾವಣೆ ನೀತಿಸಂಹಿತೆ ಇರುವ ಸಂದರ್ಭದಲ್ಲೇ 94 ಕೋಟಿ ರೂ. ವರ್ಗಾವಣೆಯಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರದ್ದು ಆತ್ಮಹತ್ಯೆ ಅಲ್ಲ. ಅದು ಈ ಸರಕಾರವೇ ಮಾಡಿದ ಕೊಲೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಆಡಳಿತದಲ್ಲಿ ಬಿಗಿ ಇದ್ದಿದ್ದರೆ ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಆಗುತ್ತಿರಲಿಲ್ಲ ಎಂದರು. ನ್ಯಾ| ನಾಗಮೋಹನ್ ದಾಸ್ ಅವರಿಂದ ಶೇ. 40 ಕಮಿಷನ್ ತನಿಖೆ ಮಾಡಿಸುತ್ತಿದ್ದೀರಿ. ದಾಖಲೆ ಇಲ್ಲದೆ ಡಂಗೂರ ಹೊಡೆದಿರಿ ಅಲ್ಲವೇ? ಸಾಕ್ಷಿ ಇಲ್ಲದೆ ಈಗ ಹುಡುಕುತ್ತಾ ಇದ್ದೀರಾ? ಕೆಂಪಣ್ಣ ಆಯೋಗದ ವರದಿಯನ್ನು ಏನು ಮಾಡಿದ್ದೀರಿ? ಎಂದು ರಾಜ್ಯ ಸಕಾರವನ್ನು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.