Ullal ಕುತ್ತಾರು ಕೊರಗಜ್ಜನ ಕೋಲದಲ್ಲಿ ಕತ್ರಿನಾ, ಕೆ.ಎಲ್. ರಾಹುಲ್ ಭಾಗಿ
Team Udayavani, Jul 15, 2024, 12:04 AM IST
ಉಳ್ಳಾಲ: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ರವಿವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ನ ಖ್ಯಾತ ನಟಿ ಕತ್ರಿನಾ ಕೈಫ್(Katrina Kaif), ಕ್ರಿಕೆಟಿಗ ಕೆ.ಎಲ್. ರಾಹುಲ್ (KL Rahul) ಹಾಗೂ ನಟ ಸುನಿಲ್ ಶೆಟ್ಟಿ(Sunil Shetty) ಕುಟುಂಬ ಭಾಗಿಯಾಗಿತ್ತು.
ಕತ್ರಿನಾ ಕೈಫ್, ಸುನಿಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಮ್ಯಾಟ್ರಿಕ್ಸ್ ಎಂಟರ್ಟೈನ್ಮೆಂಟ್ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಂ. ಕಾಮತ್ ಸಹಿತ 9 ಮಂದಿಯ ಕೋಲವನ್ನು ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು.
ಮಹಿಳೆಯರಿಗೆ ರಾತ್ರಿ ಹೊತ್ತು ಕಟ್ಟೆಯ ಒಳಗೆ ಪ್ರವೇಶ ಇಲ್ಲದ ಕಾರಣ ಕತ್ರಿನಾ, ರೇಷ್ಮಾ ಮತ್ತು ಆಧ್ಯಾ ಅವರು ದೈವಸ್ಥಾನದ ಕಚೇರಿಯಲ್ಲೇ ಉಳಿದರು ಹಾಗೂ ಹೊರಗಿನಿಂದಲೇ ಕೋಲವನ್ನು ವೀಕ್ಷಿಸಿದರು.
ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದಾರೆ. ಸಂಜೆ 6 ಗಂಟೆ ವೇಳೆಗೆ ಕುತ್ತಾರಿಗೆ ಆಗಮಿಸಿದ್ದ ಬಾಲಿವುಡ್ ಕುಟುಂಬ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ದೈವಸ್ಥಾನದ ಆಡಳಿತ ಮಂಡಳಿಯಲ್ಲಿ ಕೋರಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.