Bengaluru: ರಾತ್ರಿ 2ರವರೆಗೂ ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್ ಓಪನ್‌ಗೆ ಮನವಿ
Team Udayavani, Jul 15, 2024, 12:01 PM IST
ಬೆಂಗಳೂರು: ರಾಜಧಾನಿ ವ್ಯಾಪ್ತಿಯಲ್ಲಿ ತಡರಾತ್ರಿ 2 ಗಂಟೆವರೆಗೂ ಬಾರ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್ ಮತ್ತು ಪಬ್‌ಗಳನ್ನು ತೆರೆಯಲು ಅವಕಾಶ ಒದಗಿಸುವಂತೆ ಬೃಹತ್ ಬೆಂಗಳೂರು ಹೋಟೆಲುಗಳ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ.
ಈ ಬಗ್ಗೆ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಹೊಳ್ಳ, ಬಾಡಿಗೆ, ಗ್ಯಾಸ್, ಸಿಬ್ಬಂದಿ ನಿರ್ವಹಣೆಗೆ ಹೆಚ್ಚು ವೆಚ್ಚ ಭರಿಸುತ್ತಿದ್ದೇವೆ. ಶೇ.18 ಜಿಎಸ್ಟಿ ಪಾವತಿ ಮಾಡುತ್ತಿದ್ದೇವೆ. ಹೋಟೆಲ್ ಉದ್ಯಮ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಧ್ಯರಾತ್ರಿ 2 ಗಂಟೆವರೆಗೆ ಅವಧಿ ವಿಸ್ತರಣೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.
ಈಗಾಗಲೇ ಅಬಕಾರಿ ತೆರಿಗೆ ಮೂಲಕ ನೂರಾರು ಕೋಟಿ ರೂ. ಹೆಚ್ಚಿನ ತೆರಿಗೆ ಕಟ್ಟಲಾಗುತ್ತಿದೆ. ಪ್ರತಿ ಹೋಟೆಲ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕರು ವಾರ್ಷಿಕವಾಗಿ 9 ರಿಂದ 10 ಲಕ್ಷ ರೂ. ಪರವಾನಗಿ ಶುಲ್ಕ ಪಾವತಿ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡ ಹೋಟೆಲ್, ಬಾರ್ ಮತ್ತು ಪಬ್‌ಗಳ ಅವಧಿಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಎಲ್ಲಾ ಹೋಟೆಲ್‌ಗಳ ಮುಚ್ಚುವ ಅವಧಿಯನ್ನು ಮಧ್ಯರಾತ್ರಿ 1 ಗಂಟೆಗೆ ಮಿತಿಗೊಳಿಸಲಾಗಿದೆ. 8 ರಿಂದ 10 ತಿಂಗಳ ಹಿಂದೆ ಎಲ್ಲಾ ಹೋಟೆಲ್‌ಗಳಿಗೆ, ವಿಶೇಷವಾಗಿ ಆಸ್ಪತ್ರೆಗಳು, ವಿಮಾನ ನಿಲ್ದಾಣಗಳ ಬಳಿ ಇರುವವರಿಗೆ 24/7 ಸಮಯ ತೆರೆದಿಡಲು ವಿನಂತಿ ಮಾಡಿಕೊಂಡಿದ್ದೆವು. ಸಾಮಾನ್ಯವಾಗಿ ತಡರಾತ್ರಿ ಯವರೆಗೆ ಪ್ರಯಾಣಿಸುವ ಗ್ರಾಹಕರಿಗೆ ಸೇವೆ ನೀಡಲು ಪ್ರಸ್ತುತ ಸಮಯವನ್ನು ರಾತ್ರಿ 2 ಗಂಟೆಗೆ ಹೆಚ್ಚಿಸುವಂತೆ ಮನವಿ ಮಾಡಲಾಗಿದೆ ಎಂದು ಅಸೋಸಿಯೇಷನ್‌ನ ಗೌರವಾಧ್ಯಕ್ಷ ಅಧ್ಯಕ್ಷ ಪಿ.ಸಿ.ರಾವ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಂತ ಮೆಟ್ರೋ ಸಿಟಿಯಲ್ಲಿ ತಡರಾತ್ರಿ 2 ಗಂಟೆ ವರೆಗೆ ಪಬ್, ಬಾರ್ ಮತ್ತು ರೆಸ್ಟೋರೆಂಟ್ ತೆರೆದಿಡಲು ಅವಕಾಶ ನೀಡಬೇಕು ಎಂದು ಕೋರಿಲಾಗಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.