Red alert ;ದ.ಕ,ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಜು.16 ರಂದು ಪಿಯುಸಿವರೆಗೆ ರಜೆ
Team Udayavani, Jul 15, 2024, 7:35 PM IST
ಬೆಂಗಳೂರು :ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯೂ ರೆಡ್ ಅಲರ್ಟ್ ಘೋಷಿಸಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತ ವಾಗಿದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜುಲೈ 16 (ಮಂಗಳವಾರ) ರಂದು ಜಿಲ್ಲಾಡಳಿತಗಳು ರಜೆ ಘೋಷಿಸಿವೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ , ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ತೀವ್ರತೆ ಪಡೆದುಕೊಂಡಿರುವುದರಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ಜುಲೈ 16 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.
ಸೋಮವಾರ ಮೂರು ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿದಿದ್ದು, ಜನರು ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.