Bhatkal: ಒಂದೇ ದಿನ ತಾಯಿ, ಮಗಳು ನೇಣಿಗೆ ಶರಣು
Team Udayavani, Jul 15, 2024, 8:31 PM IST
ಭಟ್ಕಳ: ಒಂದೇ ದಿನ ತಾಯಿ ಮಗಳು ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋರಿಕಲ್ಲು ಮನೆಯಲ್ಲಿ ನಡೆದಿದ್ದು ಸಂಪೂರ್ಣ ಗ್ರಾಮವೇ ದು:ಖದ ಮಡುವಿನಲ್ಲಿದೆ.
ಮೃತರನ್ನು ಗೋರಿಕಲ್ಲು ಮನೆಯ ಕೃಷ್ಣಮ್ಮ ನಾರಾಯಣ ನಾಯ್ಕ (57) ಹಾಗೂ ಮಗಳು ಮಾದೇವಿ ದೊಡ್ಡಯ್ಯ ನಾಯ್ಕ (36) ಎಂದು ಗುರುತಿಸಲಾಗಿದೆ.
ಕೃಷ್ಣಮ್ಮ ಅವರ ಮಗಳು ಮಾದೇವಿ ತಾಯಿಯ ಮನೆಯ ಸಮೀಪದಲ್ಲಿಯೇ ಮನೆ ಮಾಡಿಕೊಂಡು ವಾಸ್ತವ್ಯ ಮಾಡಿಕೊಂಡು ಬಂದಿದ್ದಳು. ಓರ್ವ ಮಗಳು ಹಾಗೂ ಓರ್ವ ಮಗನಿದ್ದಾನೆ. ಇಂದು ಮನೆಯಲ್ಲಿದ್ದವರೆಲ್ಲರೂ ಸಂಬಂಧಿಕರ ಮದುವೆ ಹೋಗಿರುವುದರಿಂದ ಒಬ್ಬಳೇ ಇದ್ದ ಮಾದೇವಿ ನೇಣಿಗೆ ಶರಣಾಗಿದ್ದಾಳೆ.
ಮಾದೇವಿ ಮನೆಗೆ ಬಂದ ಕೃಷ್ಣಮ್ಮ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದನ್ನು ಕಂಡವಳೇ ಮನೆಗೆ ಹೋಗಿ ತಾನೂ ಕೂಡಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಮದ್ಯೆ ಮಾದೇವಿ ಈಕೆಯು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು ಅದರಲ್ಲಿ ನನ್ನ ಶವವನ್ನು ತಾಯಿ ಹಾಗೂ ಸಹೋದರ ನೋಡಬಾರದು ಎಂದು ಬರೆದಿಟ್ಟಿದ್ದಾಳೆ ಎನ್ನಲಾಗಿದೆ.
ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದು ಇಬ್ಬರ ಸಾವಿಗೆ ನಿಖರ ಕಾರಣ ಮಾತ್ರ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.