Danger Dengue: ರಾಜ್ಯದ 435 ಮಂದಿಯಲ್ಲಿ ಡೆಂಗ್ಯೂ ದೃಢ, ಒಟ್ಟು ಪ್ರಕರಣ 9,962ಕ್ಕೆ ಏರಿಕೆ
ಶಿವಮೊಗ್ಗದ ಓರ್ವ ಸಾವು, ಮೃತರ ಸಂಖ್ಯೆ 8ಕ್ಕೆ
Team Udayavani, Jul 16, 2024, 7:15 AM IST
ಬೆಂಗಳೂರು: ಬಿಬಿಎಂಪಿ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ 435 ಡೆಂಗ್ಯೂ ಪ್ರಕರಣ ವರದಿಯಾಗಿದೆ. ಶಿವಮೊಗ್ಗದ ಓರ್ವ ವ್ಯಕ್ತಿ ಡೆಂಗ್ಯೂವಿನಿಂದ ಮೃತಪಟ್ಟಿದ್ದು, ಆ ಮೂಲಕ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಬಿಬಿಎಂಪಿ 363, ಮಂಡ್ಯ 36, ಧಾರವಾಡ 14,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಲಾ 5, ಕೊಪ್ಪಳ 4, ಬಳ್ಳಾರಿ 3, ಬಾಗಲಕೋಟೆ 2, ಬೆಂಗಳೂರು ನಗರ, ಶಿವಮೊಗ್ಗ, ಯಾದಗಿರಿ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ. 65 ಮಂದಿ ಡೆಂಗ್ಯೂ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತ ವ್ಯಕ್ತಿಗಳ ಮರಣ ಪ್ರಮಾಣ ಶೇ. 0.08ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 4,989 ಶಂಕಿತ ವ್ಯಕ್ತಿಗಳ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ವರ್ಷದೊಳಗಿನ 5 ಮಂದಿ, 18 ವರ್ಷದೊಳಗಿನ 98 ಮಕ್ಕಳು, 18 ವರ್ಷ ಮೇಲ್ಪಟ್ಟ 332 ಮಂದಿಯಲ್ಲಿ ಸೋಂಕು ದೃಢವಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 9,962ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.