Veterinary Doctor; ಗುತ್ತಿಗೆ ಮೇಲೆ ಪಶು ವೈದ್ಯರ ನೇಮಕ: ಸಚಿವ ಕೆ. ವೆಂಕಟೇಶ್
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಪ್ರಶ್ನೆಗೆ ಉತ್ತರಿಸಿದ ಸಚಿವ
Team Udayavani, Jul 16, 2024, 7:23 AM IST
ಬೆಂಗಳೂರು: ಪಶುಸಂಗೋಪನೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ನೇಮಕ ಮಾಡಿಕೊಳ್ಳಲು ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಿದ್ದು, ನೇಮಕ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ ಎಂದು ಸಚಿವ ಕೆ. ವೆಂಕಟೇಶ್ ಹೇಳಿದರು.
ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ ಪ್ರಶ್ನೆಗೆ ಉತ್ತರಿಸಿದ ಅವರು, ಉಡುಪಿ ಜಿಲ್ಲೆಯಲ್ಲಿ ಪಶು ಸಂಗೋಪನಾ ಇಲಾಖೆಗೆ ಒಟ್ಟು 357 ಹುದ್ದೆಗಳು ಮಂಜೂರಾಗಿದ್ದು, 77 ಹುದ್ದೆಗಳಷ್ಟೇ ಭರ್ತಿಯಾಗಿವೆ. ಇನ್ನೂ 280 ಹುದ್ದೆಗಳು ಖಾಲಿ ಇವೆ. ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದರಿಂದ ಈ ಹುದ್ದೆಗಳು ಭರ್ತಿಯಾಗಲಿವೆ ಎಂದರು.
ಮಧ್ಯಪ್ರವೇಶಿಸಿದ ಶಾಸಕ ಕೊಡ್ಗಿ, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಶು ವೈದ್ಯರ ಕೊರತೆ ಹೆಚ್ಚಿದೆ. ಆದ್ದರಿಂದ ಗುತ್ತಿಗೆ ಆಧಾರದಲ್ಲಿ ನೇಮಿಸುವ ವೈದ್ಯರನ್ನಾದರೂ ನಮ್ಮ ಕ್ಷೇತ್ರಕ್ಕೆ ನೀಡಬೇಕು ಎಂದರು. ಉತ್ತರಿಸಿದ ಸಚಿವರು, ಕುಂದಾಪುರದಲ್ಲಿ 2 ಪಶು ಆಸ್ಪತ್ರೆ, 10 ಪಶು ಚಿಕಿತ್ಸಾಲಯ, 8 ಪ್ರಾಥಮಿಕ ಪಶು ಚಿಕಿತ್ಸಾಲಯಗಳಿಗೆ ಒಟ್ಟು 79 ಹುದ್ದೆಗಳು ಮಂಜೂರಾಗಿದ್ದು, 65 ಹುದ್ದೆಗಳು ಖಾಲಿ ಇವೆ.
ಜಾನುವಾರು ಅಧಿಕಾರಿಯಿಂದ ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ, ಹಿರಿಯ ಪಶುವೈದ್ಯಕೀಯ ಪರೀಕ್ಷಕರನ್ನು ಜಾನುವಾರು ಅಧಿಕಾರಿಯಾಗಿ ಮುಂಭಡ್ತಿ ನೀಡಲಾಗಿದೆ. ಖಾಲಿ ಹುದ್ದೆಗಳನ್ನು ಪ್ರಭಾರ ವ್ಯವಸ್ಥೆ ಮೂಲಕ ನಡೆಸಲಾಗುತ್ತಿದ್ದು, ಹೊರಗುತ್ತಿಗೆ ಆಧಾರದ ಮೇಲೆ 13 ಮಂದಿ ಡಿ ದರ್ಜೆ ನೌಕರರು ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.