Mulur: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ
Team Udayavani, Jul 16, 2024, 12:11 AM IST
ಕಾಪು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಗೂಡಂಗಡಿ ಮುಂಭಾಗದ ಮರಕ್ಕೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಪೆಟ್ರೋಲ್ ಪಂಪ್ ಬಳಿ ಸೋಮವಾರ ಸಂಭವಿಸಿದೆ.
ಗೂಡಂಗಡಿ ಬಳಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳುಂಟಾಗಿವೆ. ಗಾಯಾಳು ಚಾಲಕನನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಯುವಕ ಆತ್ಮಹತ್ಯೆ
ಕಾಪು: ಇಲ್ಲಿನ ಪಡು ಗ್ರಾಮದ ನಿವಾಸಿ ಮೀನುಗಾರಿಕಾ ವೃತ್ತಿಯ ನಿತಿನ್ (33) ರವಿವಾರ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರವಿವಾರ ತಾಯಿ ಕಾರ್ಕಳದ ಆಶ್ರಮದಲ್ಲಿದ್ದ ಹಿರಿಯ ಮಗ ಸಚಿನ್ನನ್ನು ಮನೆಗೆ ಕರೆದು ಕೊಂಡು ಬರಲು ತೆರಳಿದ್ದಾಗ ಈ ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.