Bengaluru Airport: ವಿಮಾನ ನಿಲ್ದಾಣದಲ್ಲಿ 5 ದಿನದಲ್ಲಿ 8 ಕೋಟಿ ರೂ. ಚಿನ್ನ ಜಪ್ತಿ
Team Udayavani, Jul 16, 2024, 10:25 AM IST
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 5 ದಿನಗಳ ಅಂತರದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ 11 ಪ್ರಕರಣಗಳು ಹಾಗೂ 8 ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳನ್ನು ಪತ್ತೆ ಮಾಡಿದ್ದು, 8 ಮಂದಿ ಸ್ಮಗ್ಲರ್‌ಗಳನ್ನು ಬಂಧಿಸಿದ್ದಾರೆ. ಜುಲೈ 9 ರಿಂದ ಜುಲೈ 13ರವರೆಗೆ ವಿವಿಧ 11 ಅಕ್ರಮ ಚಿನ್ನ ಸಾಗಣೆ ಪ್ರಕರಣಗಳನ್ನ ಪತ್ತೆ ಮಾಡಿದ್ದಾರೆ.
ಕಂದಾಯ ಗುಪ್ತಚಾರ ನಿರ್ದೇಶನಾಲಯದ ಖಚಿತ ಮಾಹಿತಿ ಮೇರೆಗೆ ಪ್ರಕರಣಗಳು ಬೆಳಕಿಗೆ ಬಂದಿದ್ದು, 11 ಪ್ರಕರಣಗಳಲ್ಲಿ 6.6 ಕೋಟಿ ರೂ. ಮೌಲ್ಯದ 9 ಕೆ.ಜಿ. ತೂಕದ ಚಿನ್ನ ಜಪ್ತಿ ಮಾಡಿದ್ದಾರೆ. 8 ವಿದೇಶಿ ಕರೆನ್ಸಿ ಪ್ರಕರಣಗಳು ಪತ್ತೆಯಾಗಿದ್ದು, ಸುಮಾರು 1.59 ಕೋಟಿ ರೂ. ಮೌಲ್ಯದ ವಿದೇಶಿ ಕರೆನ್ಸಿಗಳನ್ನು ವಶಕ್ಕೆ ಪೆಡದುಕೊಂಡಿದ್ದಾರೆ.
ಬಂಧಿತ 8 ಮಂದಿ ಆರೋಪಿಗಳು ಶಾರ್ಜಾ, ದುಬೈ, ಬಹರೇನ್, ಶ್ರೀಲಂಕಾ, ಕೊಲೊಂಬೊ ದೇಶದಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನ ಹಾಗೂ ವಿದೇಶಿ ಕರೆನ್ಸಿ ಸಾಗಿಸುವ ಯತ್ನದಲ್ಲಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.