![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 16, 2024, 2:54 PM IST
ನವನಟ ರೋಹಿತ್ ನಾಯಕರಾಗಿರುವ “ರಕ್ತಾಕ್ಷ’ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ನಟ ವಿಜಯ್ ರಾಘವೇಂದ್ರ, ನಟಿ ಸುಮನ್ ನಗರ್‌ಕರ್ ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದರು.
ಚಿತ್ರ ಜುಲೈ 26ಕ್ಕೆ ತೆರೆಕಾಣುತ್ತಿದೆ. ನಟ ರೋಹಿತ್ ಮಾತನಾಡಿ, “ಕಷ್ಟಪಟ್ಟು ಇಲ್ಲಿಗೆ ಬಂದಿದ್ದೇನೆ. ರಂಗಭೂಮಿಯಲ್ಲೂ ಕೆಲಸ ಮಾಡಿದ್ದೇನೆ. ಅಲ್ಲಿ ಒಳ್ಳೆಯ ಹೆಸರು ಬಂತು. ಭಿಕ್ಷುಕ ರೋಲ್ ಮಾಡಿದೆ. ಅದೇ ರೋಲ್ ಹಿಟ್ ಆಯ್ತು. ಕನ್ನಡ ಚಿತ್ರರಂಗ ಒಂದು ಹೆಮ್ಮರ. ಈ ಹೆಮ್ಮರದಲ್ಲಿ ನಾನು ಒಂದು ಚಿಕ್ಕ ಹಸಿರು ಎಲೆಯಾಗಿದ್ದರೆ ನನ್ನ ಲೈಫ್ ಸಾರ್ಥಕ. ಉತ್ತರ ಕರ್ನಾಟಕಕ್ಕೆ ನೂರಾರು ವರ್ಷಗಳ ಕಲೆ ಇತಿಹಾಸವಿದೆ. ಬಹಳಷ್ಟು ಕಲಾವಿದರು ಬಂದಿದ್ದಾರೆ. ನಮ್ಮಲ್ಲಿ ಯಾರು ಹೀರೋ ಇಲ್ಲ ಎಂಬ ಕೊರಗು ಇದೆ. ಬಹಳಷ್ಟು ಕಲೆ ಇದೆ. ದಾರಿ ಗೊತ್ತಿಲ್ಲ. ನನ್ನಿಂದ ಹತ್ತಾರು ಜನರಿಗೆ ಆ ದಾರಿ ಸಿಕ್ಕಿದರೆ ಆಯಿತು ಎಂದರೆ ನನ್ನ ಜೀವನದ ಸಾರ್ಥಕ’ ಎಂದರು.
ರೋಹಿತ್ ಹೀರೋ ಆಗಿರುವ ಜೊತೆಗೆ ತಮ್ಮದೇ ಸಾಯಿ ಪೊ›ಡಕ್ಷನ್ ಹೌಸ್ ನಿರ್ಮಾಣ ಸಂಸ್ಥೆಯ ಮೂಲಕ “ರಕ್ತಾಕ್ಷ’ ಸಿನಿಮಾವನ್ನು ನಿರ್ಮಾಣ ಸಹ ಮಾಡಿದ್ದಾರೆ. ವಾಸುದೇವ ಎಸ್. ಎನ್ “ರಕ್ತಾಕ್ಷ’ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಧೀರೇಂದ್ರ ಡಾಸ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ.
ಚಿತ್ರಕ್ಕೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ ಬರೆದಿದ್ದಾರೆ. ಚಿತ್ರದಲ್ಲಿ ರೂಪಾ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರತ್, ನಿವೀಕ್ಷಾ ನಾಯ್ಡು, ಗುರುದೇವ ನಾಗರಾಜ ಹಾಗೂ ಖಳನಾಯಕ ಪಾತ್ರದಲ್ಲಿ ನಟ ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.