Government Employees: ಸದನದಲ್ಲಿ ವೇತನ ಪರಿಷ್ಕರಣೆ ಮಾಹಿತಿ ಬಿಚ್ಚಿಟ್ಟ ಸಿದ್ದರಾಮಯ್ಯ
ಸರಕಾರಕ್ಕೆ ವಾರ್ಷಿಕ 20,208 ಕೋ.ರೂ. ಹೆಚ್ಚುವರಿ ವೆಚ್ಚ, 2024-25ರ ಬಜೆಟ್‌ನಲ್ಲಿ ಅನುದಾನ ಮೀಸಲು: ಸಿಎಂ
Team Udayavani, Jul 17, 2024, 7:15 AM IST
ಬೆಂಗಳೂರು: ರಾಜ್ಯ ಸರಕಾರಿ ನೌಕರರು ಹಾಗೂ ನಿವೃತ್ತ ನೌಕರರ ವೇತನ ಹಾಗೂ ಪಿಂಚಣಿ ಪರಿಷ್ಕರಣೆ ಬಗ್ಗೆ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.
ಇದರಿಂದ ಸರಕಾರದ ಬೊಕ್ಕಸಕ್ಕೆ ವಾರ್ಷಿಕ 20,208 ಕೋಟಿ ರೂ. ಹೆಚ್ಚುವರಿ ವೆಚ್ಚವಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನ ಮೀಸಲಿಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಆಡಳಿತ ಪಕ್ಷದ ಸದಸ್ಯರು ಮೇಜುಕುಟ್ಟಿ ಸ್ವಾಗತಿಸಿದರು.
ಪರಿಷ್ಕರಣೆ ಹೇಗೆ?
ರಾಜ್ಯ ಸರಕಾರಿ ನೌಕರರ ವೇತನ ಭತ್ತೆ, ಪಿಂಚಣಿ ಪರಿಷ್ಕರಣೆ ಬೇಡಿಕೆ ಪರಿಷ್ಕರಿಸಲು 2022ರ ನವೆಂಬರ್ 19ರಂದು 7ನೇ ರಾಜ್ಯ ವೇತನ ಆಯೋಗ ರಚಿಸಲಾಗಿತ್ತು. 2024ರ ಮಾ. 24ರಂದು ವರದಿ ಸ್ವೀಕಾರವಾಗಿತ್ತು.
7ನೇ ವೇತನ ಆಯೋಗದ ಶಿಫಾರಸಿನಂತೆ ಸರಕಾರಿ ನೌಕರರರ ವೇತನ, ವೇತನ ಸಂಬಂಧಿತ ಭತ್ತೆ, ಪಿಂಚಣಿಯನ್ನು 2024ರ ಆಗಸ್ಟ್ 1ರಿಂದ ಅನ್ವಯವಾಗುವಂತೆ ಜುಲೈ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
2024ರ ಜುಲೈ 1ರಿಂದ ನೌಕರರ ಮೂಲ ವೇತನಕ್ಕೆ ಶೇ.31ರಷ್ಟು ತುಟ್ಟಿಭತ್ಯೆ ಮತ್ತು ಶೇ. 27.50ರಷ್ಟು ಫಿಟ್‌ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿ ಪರಿಷ್ಕರಣೆ.
ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ.58.50ರಷ್ಟು ಹೆಚ್ಚಳವಾಗುತ್ತದೆ. ಮನೆ ಬಾಡಿಗೆ ಭತ್ಯೆಯಲ್ಲಿ ಶೇ.32ರಷ್ಟು ಹೆಚ್ಚಳವಾಗುತ್ತದೆ.
ನೌಕರರ ಕನಿಷ್ಠ ಮೂಲ ವೇತನವು 17 ಸಾವಿರದಿಂದ 27 ಸಾವಿರಕ್ಕೆ ಗರಿಷ್ಟ ವೇತನವು 1,50,000ದಿಂದ 2,41,200 ರೂ.ಗಳಿಗೆ ಪರಿಷ್ಕರಣೆ
ನೌಕರರ ಕನಿಷ್ಠ ಪಿಂಚಣಿ 8,500 ರೂ.ನಿಂದ 13,500 ರೂ.ಗೆ ಮತ್ತು ಗರಿಷ್ಠ ಪಿಂಚಣಿ 75,300ರಿಂದ 75,300ರಿಂದ 1,20,600 ರೂ.ಗೆ ಪರಿಷ್ಕರಣೆ.
ಈ ಪರಿಷ್ಕರಣೆಯು ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾನಿಲಯಗಳ ಬೋಧಕೇತರ ಸಿಬಂದಿಗೂ ಅನ್ವಯ.
ಸರಕಾರಿ ನೌಕರರ ವರ್ಗ ಅವಧಿ ಜು. 31ರ ವರೆಗೆ ವಿಸ್ತರಣೆ
ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿಯನ್ನು ಮತ್ತೂಮ್ಮೆ ವಿಸ್ತರಿಸಲಾಗಿದ್ದು, ಜುಲೈ 31ರ ವರೆಗೆ ಅವಕಾಶ ನೀಡಲಾಗಿದೆ. ನಿಗದಿಯಂತೆ ಜುಲೈ 9ರಂದು ಕೊನೆಗೊಳ್ಳಬೇಕಿದ್ದ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜು. 15ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಈ ತಿಂಗಳ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಆಯಾ ಇಲಾಖಾ ಸಚಿವರಿಗೆ ನೀಡಿದ್ದ ವರ್ಗಾವಣೆ ಅಧಿಕಾರವೂ ಜು. 31ರ ವರೆಗೆ ವಿಸ್ತರಣೆಯಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.