Cauvery Water; ತಮಿಳುನಾಡಿಗೆ ಹರಿಯುತ್ತಿದೆ ನಿತ್ಯ 1.5 ಟಿಎಂಸಿ ನೀರು: ಡಿ.ಕೆ ಶಿವಕುಮಾರ್
ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ, ಹೀಗೆ ಇದ್ದರೆ ಸಮಸ್ಯೆ ಪರಿಹಾರ: ಡಿಸಿಎಂ ಆಶಾಭಾವ
Team Udayavani, Jul 17, 2024, 1:14 AM IST
ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈವರೆಗೆ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ 6 ಟಿಎಂಸಿ ನೀರು ಹರಿದು ಹೋಗಿರುವುದು ದಾಖಲಾಗಿದೆ. ಅಂದರೆ ಪ್ರತೀ ದಿನ 1.5 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಬಿಡಲಾಗಿದೆ. ಪರಿಸ್ಥಿತಿ ಹೀಗೇ ಇದ್ದರೆ ಸಮಸ್ಯೆ ಬಗೆಹರಿಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಂಗಳವಾರ ವಿಧಾನಸೌಧದಲ್ಲಿ ಅಧಿಕಾರಿ ಗಳೊಂದಿಗೆ ಸಭೆ ನಡೆಸಿದ ಬಳಿಕ ವಿಧಾನಸಭೆಯಲ್ಲಿ ಈ ಕುರಿತು ಸ್ವಯಂಪ್ರೇರಿತ ಹೇಳಿಕೆ ದಾಖಲಿಸಿದ ಅವರು, ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣವು 12,827 ಕ್ಯುಸೆಕ್ ಇದ್ದು, ಹೇಮಾವತಿ ಜಲಾಶಯಕ್ಕೆ 14,027 ಕ್ಯುಸೆಕ್ ನೀರು ಹರಿದುಬರುತ್ತಿದೆ. ಅದೇ ರೀತಿ ಕೆಆರ್ಎಸ್ಗೆ 25,933 ಕ್ಯುಸೆಕ್ ಮತ್ತು ಕಬಿನಿ ಜಲಾಶಯದ ಒಳಹರಿವಿನ ಮಟ್ಟ 22,840 ಕ್ಯುಸೆಕ್ ಇದೆ ಎಂದು ವಿವರಿಸಿದರು.
ಕಾವೇರಿ ನಿಯಂತ್ರಣ ಸಮಿತಿ (ಸಿಡಬ್ಲ್ಯುಸಿ) ನಿರ್ದೇಶನದ ಪ್ರಕಾರ ಬಿಳಿಗುಂಡ್ಲುವಿನಲ್ಲಿ 40 ಟಿಎಂಸಿ ನೀರು ಮಾಪನವಾಗಬೇಕು. ಈವರೆಗೆ 6 ಟಿಎಂಸಿ ನೀರು ದಾಖಲಾಗಿದ್ದು, ದಿನಕ್ಕೆ 1.5 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಂತಾಗಿದೆ. ಪರಿಸ್ಥಿತಿ ಹೀಗೇ ಇದ್ದರೆ ಸಮಸ್ಯೆ ಬಗೆಹರಿಯಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.