Oman ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್: 13 ಭಾರತೀಯರು ನಾಪತ್ತೆ
Team Udayavani, Jul 17, 2024, 8:33 AM IST
ಹೊಸದಿಲ್ಲಿ: 13 ಭಾರತೀಯರು ಸೇರಿದಂತೆ 16 ಸಿಬಂದಿಯನ್ನು ಹೊತ್ತೊಯ್ಯುತ್ತಿದ್ದ ತೈಲ ಟ್ಯಾಂಕರ್ ಒಮಾನ್ ಕರಾವಳಿಯಲ್ಲಿ ಮುಳುಗಿದೆ ಎಂದು ದೇಶದ ಕಡಲ ಭದ್ರತಾ ಕೇಂದ್ರ ಮಂಗಳವಾರ ತಿಳಿಸಿದೆ. ಸಿಬಂದಿಗಳು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಮತ್ತು ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ.
ಕೊಮೊರೊಸ್ ಧ್ವಜದ ತೈಲ ಟ್ಯಾಂಕರ್ ‘ಪ್ರೆಸ್ಟೀಜ್ ಫಾಲ್ಕನ್’ ನಲ್ಲಿ 13 ಭಾರತೀಯರು ಮತ್ತು ಮೂವರು ಶ್ರೀಲಂಕಾದವರು ಇದ್ದರು ಎಂದು ಕಡಲ ಭದ್ರತಾ ಕೇಂದ್ರವು ಟ್ವೀಟ್ ಮಾಡಿದೆ. ಸೋಮವಾರ ಒಮಾನಿ ಬಂದರಿನ ಡುಕ್ಮ್ ಬಳಿ ರಾಸ್ ಮದ್ರಕಾದಿಂದ ಆಗ್ನೇಯಕ್ಕೆ 25 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಹಡಗು ಮುಳುಗಿದೆ.
LSEG ಯ ಶಿಪ್ಪಿಂಗ್ ಮಾಹಿತಿಯ ಪ್ರಕಾರ ಟ್ಯಾಂಕರ್ ಒಮಾನ್ ಬಂದರಿನ ಏಡೆನ್‌ಗೆ ಹೋಗುತ್ತಿತ್ತು. ತೈಲ ಟ್ಯಾಂಕರ್ ಮುಳುಗಿದೆ ಮತ್ತು ತಲೆಕೆಳಗಾದಿದೆ ಎಂದು ಒಮಾನ್‌ನ ಕಡಲ ಭದ್ರತಾ ಕೇಂದ್ರವು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದೆ. ಆದಾಗ್ಯೂ, ತೈಲ ಅಥವಾ ತೈಲ ಉತ್ಪನ್ನಗಳು ಸಮುದ್ರಕ್ಕೆ ಸೋರಿಕೆಯಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಲ್ಲ.
ನೌಕೆಯು 2007 ರಲ್ಲಿ ನಿರ್ಮಿಸಲಾದ 117-ಮೀಟರ್ ಉದ್ದದ ತೈಲ ಉತ್ಪನ್ನಗಳ ಟ್ಯಾಂಕರ್ ಆಗಿದೆ ಎಂದು LSEG ಯ ಶಿಪ್ಪಿಂಗ್ ಮಾಹಿತಿಯಲ್ಲಿ ಕಂಡು ಬಂದಿದೆ. ಈ ರೀತಿಯ ಸಣ್ಣ ಟ್ಯಾಂಕರ್‌ಗಳನ್ನು ಸಾಮಾನ್ಯವಾಗಿ ಸಣ್ಣ ಪ್ರಯಾಣಕ್ಕಾಗಿ ನಿಯೋಜಿಸಲಾಗುತ್ತದೆ.
ಡುಕ್ಮ್ ಬಂದರು ಒಮಾನ್‌ನ ನೈಋತ್ಯ ಕರಾವಳಿಯಲ್ಲಿದ್ದು, ದೇಶದ ಪ್ರಮುಖ ತೈಲ ಮತ್ತು ಅನಿಲ ಗಣಿಗಾರಿಕೆ ಯೋಜನೆಗಳ ಪ್ರಮುಖ ಕೇಂದ್ರವಾಗಿದೆ. ಪ್ರಮುಖ ತೈಲ ಸಂಸ್ಕರಣಾಗಾರ ಡುಕ್ಮ್‌ನ ವಿಶಾಲವಾದ ಕೈಗಾರಿಕಾ ವಲಯದ ಒಂದು ಭಾಗವಾಗಿ ಅತಿದೊಡ್ಡ ಏಕ ಆರ್ಥಿಕ ಕೇಂದ್ರವಾಗಿದೆ.
Updates regarding the recent capsizing incident of the Comoros flagged oil tanker southeast of Ras Madrakah pic.twitter.com/PxVLxlTQGD
— مركز الأمن البحري| MARITIME SECURITY CENTRE (@OMAN_MSC) July 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.