US; ರಿಪಬ್ಲಿಕನ್ ಸಮಾವೇಶದ ಬಳಿ ಚಾಕುಗಳೊಂದಿಗೆ ಬಂದ ವ್ಯಕ್ತಿ ಪೊಲೀಸ್ ಗುಂಡಿಗೆ ಬಲಿ
Team Udayavani, Jul 17, 2024, 8:56 AM IST
ಮಿಲ್ವಾಕೀ: ಅಮೆರಿಕದ ವಿಸ್ಕಾನ್ಸಿನ್‌ನ ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶದ ಸ್ಥಳದ ಬಳಿ ಎರಡು ಚಾಕುಗಳೊಂದಿಗೆ ಶಸ್ತ್ರಸಜ್ಜಿತವಾಗಿ ಬಂದಿದ್ದ ನಿರಾಶ್ರಿತ ಕರಿಯ ವರ್ಣದ ವ್ಯಕ್ತಿಯೊಬ್ಬನನ್ನು ಮಂಗಳವಾರ ಓಹಿಯೋದ ಪೊಲೀಸ್ ಅಧಿಕಾರಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, 43 ವರ್ಷದ ಸ್ಯಾಮ್ಯುಯೆಲ್ ಶಾರ್ಪ್ ಎಂದು ಗುರುತಿಸಿರುವ ವ್ಯಕ್ತಿ, ಕೈಗಳಲ್ಲಿ ಚಾಕುಗಳನ್ನು ಹಿಡಿದುಕೊಂಡಿದ್ದ ನಿಶ್ಶಸ್ತ್ರ ವ್ಯಕ್ತಿಯ ಮೇಲೆ ದಾಳಿ ಮಾಡಲು ಮುಂದಾದಾಗ ಪರಿಸ್ಥಿತಿ ಕಂಡು ಅಧಿಕಾರಿಗಳು ಗುಂಡು ಹಾರಿಸಬೇಕಾದ ಅನಿವಾರ್ಯತೆ ಎದುರಾಯಿತು. ಘಟನಾ ಸ್ಥಳದಿಂದ ಎರಡು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಿಲ್ವಾಕೀಯಲ್ಲಿ ಭಾರೀ ಭದ್ರತೆಯ ನಡುವೆ ಈ ಘಟನೆ ಸಂಭವಿಸಿದೆ, ರಿಪಬ್ಲಿಕನ್ ರಾಷ್ಟ್ರೀಯ ಸಮಾವೇಶದ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿವಿಧ ನ್ಯಾಯವ್ಯಾಪ್ತಿಯ ಸಾವಿರಾರು ಅಧಿಕಾರಿಗಳು ಹಾಜರಿದ್ದರು. ರಿಪಬ್ಲಿಕನ್ ರಾಷ್ಟ್ರೀಯ ಸಮಾವೇಶ ಸೋಮವಾರ ಪ್ರಾರಂಭವಾಗಿದ್ದು ಗುರುವಾರ ಮುಕ್ತಾಯಗೊಳ್ಳಲಿದೆ.
ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಫಿಸರ್ವ್ ಫೋರಮ್ ಮತ್ತು ವಿಸ್ಕಾನ್ಸಿನ್ ಸೆಂಟರ್ ಡಿಸ್ಟ್ರಿಕ್ಟ್ ಸೇರಿದಂತೆ ಅನೇಕ ಪಕ್ಕದ ಸ್ಥಳಗಳಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಭಾಗಿಯಾಗಿದ್ದರು. ಪೆನ್ಸಿಲ್ವೇನಿಯಾದಲ್ಲಿ ಶನಿವಾರ ನಡೆದ ರಾಜಕೀಯ ರ್‍ಯಾಲಿಯಲ್ಲಿ ಹತ್ಯೆಯ ಯತ್ನದ ನಂತರ ಅವರು ಕಾಣಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.