Rabakavi-Banahatti: ಹಿಪ್ಪರಗಿ ಜಲಾಶಯಕ್ಕೆ 75460 ಕ್ಯೂಸೆಕ್ ನೀರು
Team Udayavani, Jul 17, 2024, 5:20 PM IST
ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ಸಮೀಪದ ಕೃಷ್ಣಾನದಿ ತುಂಬಿ ಹರಿಯುತ್ತಿದ್ದು, ಸಮೀಪದ ಹಿಪ್ಪರಗಿ ಜಲಾಶಯಕ್ಕೆ 75460 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ.
ಮಹಾರಾಷ್ಟ್ರದ ರಾಜಾಪೂರ ಜಲಾಶಯದಿಂದ ನೀರು ಭಾರಿ ಮಟ್ಟದಲ್ಲಿ ಕೃಷ್ಣಾ ನದಿಗೆ ಹರಿದು ಬರುತ್ತಿದ್ದು, ಕಳೆದ ಕೆಲ ದಿನಗಳಿಂದ ಉತ್ತಮ ಪ್ರಮಾಣದ ನೀರು ಹರಿದು ಬಂದಿದೆ. ದಿನದಿಂದ ದಿನಕ್ಕೆ ನೀರಿನ ಮಟ್ಟ ಹೆಚ್ಚಳವಾಗುತ್ತಾ ನಡೆದಿದೆ.
ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಾದ ಕೊಯ್ನಾ 11 ಮಿ.ಮೀ., ನೌಜಾ 19 ಮಿ.ಮೀ., ಮಹಾಬಳೇಶ್ವರ 35 ಮಿ.ಮೀ., ವಾರಣಾ 13 ಮಿ.ಮೀ., ರಾಧಾನಗರಿ 44 ಮಿ.ಮೀ., ದೂಧಗಂಗಾ 20 ಮಿ.ಮೀ. ಮಳೆಯಾಗಿರುವುದರಿಂದ ಹಿಪ್ಪರಗಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರೀದು ಬರುತ್ತಿದೆ.
ಇಂದು ಬುಧವಾರ ಹಿಪ್ಪರಗಿ ಜಲಾಶಯಕ್ಕೆ ಒಟ್ಟು 75460 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 76988 ಕ್ಯೂಸೆಕ್ಸ್ ನೀರನ್ನು ಮುಂದೆ ಹರಿ ಬೀಡಲಾಗುತ್ತಿದೆ. 6 ಟಿಎಂಸಿ ಸಾಮರ್ಥ್ಯದ ಹಿಪ್ಪರಗಿ ಜಲಾಶಯ 2.84 ಟಿಎಂಸಿ ನೀರು ಸಂಗ್ರಹವಿದ್ದು, ನೀರಿನ ಮಟ್ಟ 521.25 ಮೀ. ಇದೆ ಎಂದು ಜಮಖಂಡಿ ವಲಯದ ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.