Pm Modi: ಮುಸ್ಲಿಂ ಬಗ್ಗೆ ಪ್ರಧಾನಿ ಮೋದಿ ಭಾಷಣ: ಖಾಸಗಿ ದೂರು ವಜಾ
Team Udayavani, Jul 18, 2024, 10:42 AM IST
ಬೆಂಗಳೂರು: “ಮುಸ್ಲಿಮರನ್ನು ನುಸುಳುಕೋರರು ಎಂದು ಆರೋಪಿಸಿರುವುದರ ಜೊತೆಗೆ ಕಾಂಗೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಅದು ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ’ ಎಂಬುದಾಗಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆರೋಪ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಭಾಷಣ ಹಿಂದೂ ಮುಸ್ಲಿಮರ ನಡುವೆ ಗೊಂದಲಕ್ಕೆ ಕಾರಣವಾಗಲಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿ ಬೆಂಗಳೂರಿನ ಹೆಬ್ಟಾಳದ ನಿವಾಸಿಯೊಬ್ಬರು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರಿನ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು, ದೂರುದಾರರು ಸಲ್ಲಿಸಿರುವ ಪ್ರಕರಣವನ್ನು ತನಿಖೆಗೆ ವಹಿಸುವುದಕ್ಕೆ ಅರ್ಹವಿಲ್ಲ ಎಂದು ಅಭಿಪ್ರಾಯಪಟ್ಟು ದೂರನ್ನು ವಜಾಗೊಳಿಸಿ ಆದೇಶಿಸಿದೆ.
ಏನಿದು ಪ್ರಕರಣ?: ಕಳೆದ ಏಪ್ರಿಲ್‌ನಲ್ಲಿ ರಾಜಸ್ಥಾನದಲ್ಲಿ ನಡೆದಿದ್ದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೆಂದ್ರ ಮೋದಿ ಭಾಷಣವು ಮುಸ್ಲಿಮರನ್ನು ನಿಂದಿಸುವಂತಿದೆ. ಈ ದೇಶದ ಸಂಪತ್ತನ್ನು ಲೂಟಿ ಹೊಡೆದ ನುಸುಳುಕೋರರಿಗೆ ಇಲ್ಲಿರುವ ಮುಸ್ಲಿಮರನ್ನು ಹೋಲಿಕೆ ಮಾಡುವಂತೆ ಉಳಿದ ಜನರನ್ನು ಪ್ರೇರೇಪಿಸುವಂತಿದೆ. ಹಾಗಾಗಿ, ಪ್ರಧಾನಿ ಮೋದಿ ವಿರುದ್ಧ ಕ್ರಮಕೈಗೊಳ್ಳಬೇಕು. ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ದೂರುದಾರರು ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
Kannada ಸಾಹಿತ್ಯ ಸಮ್ಮೇಳನ 2 – 3 ವರ್ಷಕ್ಕೊಮ್ಮೆ ನಡೆಯಲಿ
MUST WATCH
ಹೊಸ ಸೇರ್ಪಡೆ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Bettampady: ಶಾಲಾ ಮಕ್ಕಳಿಂದ ಮನೆಯಲ್ಲಿ ಭತ್ತದ ಕೃಷಿ ಅಭಿಯಾನ ಯಶಸ್ವಿ
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.