Netravathi River ನೀರಿನ ಮಟ್ಟ ಏರಿಕೆ; ಆಲಡ್ಕದಲ್ಲಿ ಮನೆಗಳು ಜಾಲಾವೃತ; ಸ್ಥಳಕ್ಕೆ ಎಸಿ ಭೇಟಿ
Team Udayavani, Jul 18, 2024, 11:27 AM IST
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಪ್ರಮಾಣ ಏರುತ್ತಲೇ ಇದ್ದು, ಬಂಟ್ವಾಳದಲ್ಲಿ ನೀರಿನ ಮಟ್ಟ ಸುಮಾರು 8 ಮೀ.ಗೆ ತಲುಪಿದ ಹಿನ್ನೆಲೆ ಪಾಣೆಮಂಗಳೂರಿನ ಆಲಡ್ಕದಲ್ಲಿ ಮನೆಗಳು ಮುಳುಗಡೆಯಾಗಿದ್ದು, ಸುಮಾರು 10 ಕುಟುಂಬಗಳನ್ನು ತಾಲೂಕು ಆಡಳಿತ ಸ್ಥಳಾಂತರ ಮಾಡಿದೆ.
ನದಿ ಪಾತ್ರದ ಗ್ರಾಮಗಳಲ್ಲಿ ಕೃಷಿ ತೋಟಗಳು ಜಲಾವೃತಗೊಂಡಿವೆ.
ಬಂಟ್ವಾಳದ ಜಾಲಾವೃತ ಪ್ರದೇಶಗಳಿಗೆ ಮಂಗಳೂರು ಸಹಾಯಕ ಕಮಿಷನರ್ ಹರ್ಷವರ್ಧನ ಪಿ.ಜೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು.
ಬಂಟ್ವಾಳದಲ್ಲಿ ನದಿ ನೀರಿನ ಅಪಾಯಕಾರಿ ಮಟ್ಟ 8.5 ಮೀ.ಆಗಿದ್ದು, ನಿನ್ನೆ ಸಂಜೆಯಿಂದ ನೀರಿನ ಮಟ್ಟ ಏರುತ್ತಲೇ ಇದೆ. ತಾಲೂಕಿನ ನದಿ ಪಾತ್ರದ ಗ್ರಾಮಗಳಾದ ಸರಪಾಡಿ, ಬರಿಮಾರು, ಮಣಿನಾಲ್ಕೂರು ಗ್ರಾಮಗಳಲ್ಲಿ ಕೆಲವೊಂದು ತೋಟ, ಗದ್ದೆಗಳಿಗೆ ನೀರು ನುಗ್ಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.