Best Green School ಪ್ರಶಸ್ತಿಗೆ ಆಯ್ಕೆಯಾದ ವಿಠ್ಠಲ ನಗರ ಸರ್ಕಾರಿ ಪ್ರಾಥಮಿಕ ಪಾಠಶಾಲೆ
Team Udayavani, Jul 18, 2024, 5:59 PM IST
ತೀರ್ಥಹಳ್ಳಿ : ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಕೊಡಮಾಡುವ ಪ್ರತಿಷ್ಠಿತ ಶ್ರೇಷ್ಠ ಹಸಿರು ಮತ್ತು ಸ್ವಚ್ಛ ಶಾಲೆ ಪ್ರಶಸ್ತಿಗೆ ತಾಲೂಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಠ್ಠಲ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.
ಸರ್ಕಾರಿ ಶಾಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ವಚ್ಛತೆ ಮತ್ತು ಸುಸ್ಥಿರತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಶಾಲೆಗಳನ್ನು ಆಯ್ಕೆ ಮಾಡಿ ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ.
ಪ್ರಶಸ್ತಿಗೆ ಆಯ್ಕೆಯಾಗಲು 22 ಮಾನದಂಡಗಳಿದ್ದು, ಟ್ರಸ್ಟ್‌ನ ತಂಡ ಅರ್ಜಿ ಸಲ್ಲಿಸಿದ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆಯ ಬಳಿಕ ಪ್ರಶಸ್ತಿಗಳಿಗೆ ಆಯ್ಕೆ ನಡೆಯುತ್ತದೆ.
ಈ ನಿಟ್ಟಿನಲ್ಲಿ ಪ್ರಶಸ್ತಿಗೆ ಪಟ್ಟಣದ ಕೂಗಳತೆ ದೂರದಲ್ಲಿರುವ ವಿಠ್ಠಲ ನಗರ ಶಾಲೆಯ ಶಾಲಾ ಪ್ರವೇಶ ದ್ವಾರ, ಶಾಲಾ ಆವರಣ ಮತ್ತು ಸುತ್ತಮುತ್ತಲಿನ ಪರಿಸರದ ಸ್ವಚ್ಛತೆ, ಶಿಸ್ತು ಮತ್ತು ನೈರ್ಮಲ್ಯ ,ಶಾಲಾ ಕಟ್ಟಡ, ತರಗತಿ ಕೊಠಡಿ,ನಲಿ ಕಲಿ ಕೊಠಡಿ , ಕಂಪ್ಯೂಟರ್ ತರಗತಿ ಕೊಠಡಿ, ಅಡಿಗೆ ಕೋಣೆ, ಕಚೇರಿ ಕೊಠಡಿ, ಶಾಲಾ ಸಭಾಂಗಣ, ಶಾಲೆಯ ಹೂ ತೋಟ, ಶೌಚಾಲಯಗಳು ಇವೆಲ್ಲಾ ಈ ಶಾಲೆಗಳಲ್ಲಿವೆ.
ಸಾಮುದಾಯಿಕ ಕಾರ್ಯಕ್ರಮ: ಸ್ಥಳೀಯ ಗ್ರಾಮಗಳ ಸ್ವಚ್ಛತೆ, ಪರಿಸರ ಮಾಲಿನ್ಯ ಮತ್ತು ಇತರೆ ವಿಷಯಗಳ ಕುರಿತು ಜಾಗೃತಿ ಮೂಡಿಸುವಂತಹ ಸಾಮಾಜಿಕ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆ.
ಪಠ್ಯೇತರ ಚಟುವಟಿಕೆ: ಕ್ರೀಡೆ ಆಟೋಟ, ಕಲೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಇನ್ನಿತರೆ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ.
ಶಿಸ್ತು: ವಿದ್ಯಾರ್ಥಿಗಳ ಸಮಯಪಾಲನೆ, ಶಾಲಾ ನೀತಿ ನಿಯಮಗಳ ಪಾಲನೆ ಮತ್ತು ಶಾಲೆಯ ಚಟುವಟಿಕೆಗಳಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ.
ಲಿಖಿತ ಪ್ರಶಂಸಾಪತ್ರಗಳು
ಪರಿಸರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಗಿಡಗಳಿಗೆ ದಿನನಿತ್ಯ ನೀರುಣಿಸುವ ಮತ್ತು ತೋಟಗಳ, ಮರಗಳ ನಿರ್ವಹಣೆ ಕಾರ್ಯಕ್ರಮದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಇತ್ಯಾದಿ ಗಳನ್ನು ಗಮನಿಸಿ ಶಾಲೆಗೆ ಶ್ರೇಷ್ಠ ಹಸಿರು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಯಲ್ಲಿ ಹತ್ತು ಸಾವಿರ ರೂಪಾಯಿ ನಗದು ಬಹುಮಾನ ಮತ್ತು ಪಾರಿತೋಷಕವನ್ನು ಒಳಗೊಂಡಿದ್ದು,27.07.24ರಂದು ಮುದ್ದೇನಹಳ್ಳಿಯಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು.ಈ ಪ್ರಶಸ್ತಿ ದೊರೆಯಲು ಶಾಲಾ ಪ್ರಗತಿಯಲ್ಲಿ ಶ್ರಮಿಸುತ್ತಿರುವ ಸಮಸ್ತ ಶಾಲಾ ಪರಿವಾರಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಕೃತಜ್ಞತೆ ಸಲ್ಲಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.