Ankola 30 ಟನ್ ಗ್ಯಾಸ್ ಖಾಲಿಗೆ ಪ್ರಚಂಡ ಸಾಹಸ! ಗಂಗಾವಳಿ ನದಿಗೆ ಅಡುಗೆ ಅನಿಲ ಬಿಡುಗಡೆ
ಸುರಕ್ಷಿತ ಸ್ಥಳಕ್ಕೆ ಸ್ಥಳೀಯರ ಸ್ಥಳಾಂತರ
Team Udayavani, Jul 19, 2024, 6:50 AM IST
ಅಂಕೋಲಾ: ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದ ವೇಳೆ ಗಂಗಾವಳಿ ನದಿಯಲ್ಲಿ ತೇಲಿ ಹೋಗಿದ್ದ ಎಚ್‌ಪಿ ಗ್ಯಾಸ್ ಟ್ಯಾಂಕರ್ ಮೇಲೆತ್ತುವ ಸವಾಲಿನ ಕಾರ್ಯಾಚರಣೆ ಗುರುವಾರ ಆರಂಭಗೊಂಡಿದೆ.
ಎರಡು ದಿನಗಳಿಂದ ಶಿರೂರಿಗೆ 7 ಕಿ.ಮೀ. ದೂರದ ಸಗಡಗೇರಿ ಗ್ರಾಮದ ಬಳಿ ನದಿಯಲ್ಲಿ ತೇಲುತ್ತಾ ಲಂಗರು ಹಾಕಿದ್ದ ಟ್ಯಾಂಕರನ್ನು ನದಿಯಲ್ಲೇ ಅನಿಲ ಖಾಲಿ ಮಾಡಿ ಹೊರಗೆಳೆದು ತರಲಾಗುತ್ತಿದೆ.
ಮಂಗಳೂರಿನ ಎಂಆರ್‌ಪಿಎಲ್, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ನೌಕಾದಳ ಹಾಗೂ ಇತರ ಪರಿಣತರ ತಂಡ ಗುರುವಾರ ಬೆಳಗ್ಗೆಯೇ ಬೋಟ್ ಮೂಲಕ ತೆರಳಿ ಟ್ಯಾಂಕರ್‌ಗೆ ಹಗ್ಗದಿಂದ ಕಟ್ಟಿ ನಾಲ್ಕು ಕ್ರೇನ್‌ಗಳನ್ನು ಬಳಸಿ ಅರ್ಧತಾಸಿನಲ್ಲೇ ದಡದಂಚಿಗೆ ಎಳೆದು ತಂದಿತು.
ಅಪರಾಹ್ನ 2 ಗಂಟೆ ಹೊತ್ತಿಗೆ ಟ್ಯಾಂಕರ್‌ನಿಂದ ಅನಿಲವನ್ನು ನದಿ ನೀರಿಗೆ ಬಿಡುವ ಕಾರ್ಯ ಆರಂಭಗೊಂಡಿತು. ಶುಕ್ರವಾರ ಸಂಜೆ ಹೊತ್ತಿಗೆ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.