Mangaluru: ಮನೆ ಕಳ್ಳತನ ಪ್ರಕರಣ… ಸೊತ್ತುಗಳ ಸಮೇತ ಮೂವರು ಆರೋಪಿಗಳ ಬಂಧನ
Team Udayavani, Jul 19, 2024, 12:54 PM IST
ಮಂಗಳೂರು: ನಗರದ ಕೋಡಿಕ್ಕಲ್ ವಿವೇಕಾನಂದ ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಉರ್ವಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವೆಂಕಟೇಶ್ (21), ಸಾಗರ್ (21) ಮತ್ತು ರಂಜಿತ್ (20) ಬಂಧಿತ ಆರೋಪಿಗಳು.
ಜುಲೈ 6 ರಂದು ಮೂವರು ಆರೋಪಿಗಳು ಕೋಡಿಕ್ಕಲ್ ವಿವೇಕಾನಂದ ನಗರದಲ್ಲಿರುವ ಮನೆಯೊಂದಕ್ಕೆ ಕನ್ನ ಹಾಕಿ ಸುಮಾರು 80 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ್ದರು, ಈ ಕುರಿತು ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಿಸಿಕೊಂಡ ಪೊಲೀಸರು ಕಳ್ಳರ ಪತ್ತೆಗೆ ಬಲೇ ಬೀಸಿದ್ದಾರೆ ಅದರಂತೆ ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಗಂಗೌಡನಹಳ್ಳಿ ಬಳಿ ಬಂಧಿಸಲಾಗಿದೆ, ಅಲ್ಲದೆ ಬಂಧಿತರಿಂದ 4,64,750/- ರೂ ಮೌಲ್ಯದ ಚಿನ್ನಾಭರಣ ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಸ್ಕೂಟಿಯನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದನ್ನೂ ಓದಿ: Bantwala: ನದಿಯಲ್ಲಿ ನೀರಿನ ಮಟ್ಟ ಏರಿಕೆ… ರಸ್ತೆಗಳು ಜಲಾವೃತ, ಸಂಚಾರ ಕಡಿತಗೊಳ್ಳುವ ಭೀತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.