Microsoft Global Outage: ಮೈಕ್ರೋಸಾಫ್ಟ್ ತಾಂತ್ರಿಕ ದೋಷ…ಜಾಗತಿಕವಾಗಿ ಬಳಕೆದಾರರ ಪರದಾಟ
ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿರುವುದು ಗಮನಕ್ಕೆ ಬಂದಿದೆ
Team Udayavani, Jul 19, 2024, 3:00 PM IST
ನವದೆಹಲಿ: ಸಾಫ್ಟ್ ವೇರ್ ಕ್ಷೇತ್ರದ ದಿಗ್ಗಜ ಮೈಕ್ರೋಸಾಫ್ಟ್ ವಿಂಡೋಸ್ ನಲ್ಲಿ ತಾಂತ್ರಿಕ ದೋಷ ( Technical Issues) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 19) ಭಾರತ ಸೇರಿದಂತೆ ಜಾಗತಿಕವಾಗಿ ಮೈಕ್ರೋಸಾಫ್ಟ್ ಬಳಕೆದಾರರು ಪರದಾಡುವಂತಾಗಿತ್ತು.
ಭಾರತದಲ್ಲಿ ವಿಸ್ತಾರ, ಇಂಡಿಗೋ, ಸ್ಪೈಸ್ ಜೆಟ್ ಮತ್ತು ಅಕ್ಸಾ ವಿಮಾನ ಸಂಸ್ಥೆಗಳು ಟಿಕೆಟ್ ಬುಕ್ಕಿಂಗ್, ಚೆಕ್ ಇನ್ ಸೇರಿದಂತೆ ಬ್ಯಾಂಕ್, ಐಟಿ ಹಾಗೂ ಇತರ ಕಂಪನಿಗಳು ಹಲವು ತಾಂತ್ರಿಕ ದೋಷಗಳನ್ನು ಎದುರಿಸಿರುವುದಾಗಿ ವರದಿ ತಿಳಿಸಿದೆ.
ತಾಂತ್ರಿಕ ದೋಷದಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿರುವುದು ಗಮನಕ್ಕೆ ಬಂದಿದೆ. ಮೈಕ್ರೋಸಾಫ್ಟ್ ತಂಡ ಸಮಸ್ಯೆಯನ್ನು ಬಗೆಹರಿಸಲು ಸಕ್ರಿಯವಾಗಿ ತೊಡಗಿಕೊಂಡಿದೆ. ನಮ್ಮಿಂದಾದ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ. ಸಮಸ್ಯೆ ಬಗೆಹರಿದ ತಕ್ಷಣವೇ ಈ ಬಗ್ಗೆ ಮಾಹಿತಿ ನೀಡುತ್ತೇವೆ. ನಿಮ್ಮ ಸಹನೆ ಮತ್ತು ಸಹಕಾರಕ್ಕೆ ಧನ್ಯವಾದಗಳು ಎಂದು ಸ್ಪೈಸ್ ಜೆಟ್ ಎಕ್ಸ್ ನಲ್ಲಿ ತಿಳಿಸಿದೆ.
ಮೈಕ್ರೋಸಾಫ್ಟ್ ಸಮಸ್ಯೆಯಿಂದಾಗಿ ನಮ್ಮ ಕಂಪ್ಯೂಟರ್ ಗಳು ಕಾರ್ಯನಿರ್ವಹಿಸುತ್ತಿಲ್ಲ. ಇದು ಇತರ ಕಂಪನಿಗಳಿಗೂ ಸಮಸ್ಯೆ ಎದುರಿಸುವಂತಾಗಿದೆ. ಈ ಸಂದರ್ಭದಲ್ಲಿ ಟಿಕೆಟ್ ಬುಕ್ಕಿಂಗ್, ಚೆಕ್ ಇನ್, ಬೋರ್ಡಿಂಗ್ ಪಾಸ್ ಪಡೆಯಲು ಅಸಾಧ್ಯ…ನಿಮ್ಮ ಸಹನೆಗೆ ಮೆಚ್ಚುಗೆ ವ್ಯಕ್ತಪಡಿಸುವುದಾಗಿ ಇಂಡಿಗೋ ಎಕ್ಸ್ ನಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.